ವಾರಾಣಸಿ:ಕಾಶಿಯಲ್ಲಿ ನಿರ್ಲಕ್ಷ್ಯಕ್ಕೊಳಾಗಿದ್ದ ಕೆಳದಿ ಅರಸರ ಕಾಲದ ಕನ್ನಡ ಶಾಸನದ ರಕ್ಷಣೆಗೆ ಕಾಶೀ ಪೀಠ ಸೂಕ್ತ ಕ್ರಮಕ್ಕೆ ಮುಂದಾಗಿದೆ. ಇತ್ತೀಚೆಗೆ ಕಾಶಿಯಲ್ಲಿ ಕನ್ನಡ ಶಾಸನ ಒಂದನ್ನು ಬಟ್ಟೆ ತೊಳೆಯುವುದಕ್ಕೆ ಬಳಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದನ್ನು ಗಮನಿಸಿದ ಕಾಶೀ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಶ್ರೀಪೀಠದ ವ್ಯವಸ್ಥಾಪಕರಾದ ಶಿವಾನಂದ ಹಿರೇಮಠ ಹಾಗೂ ವಕೀಲರಾದ ಉದಯಭಾನು ಸಿಂಹ ಅವರನ್ನು ಸ್ಥಳಕ್ಕೆ ಕಳುಹಿಸಿ ವಸ್ತುಸ್ಥಿತಿಯನ್ನು ಅವಲೋಕಿಸಿದ್ದಾರೆ.
ಕಾಶೀ ನಗರದಿಂದ ಸುಮಾರು 15 ಕಿಲೋಮೀಟರ್ ದೂರದಲ್ಲಿರುವ ಕಪಿಲಧಾರಾ ಎಂಬ ಗ್ರಾಮದಲ್ಲಿ ಕೆಳದಿ ಅರಸರು ಪಂಚಕ್ರೋಶಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಟ್ಟಿಸಿರುವ ಸರೋವರದ ಬಳಿ ಕನ್ನಡದ ಶಾಸನವಿದ್ದು, ಕೆಳದಿ ರಾಜ ಶಿವಪ್ಪನಾಯಕರು ಸರೋವರ ನಿರ್ಮಿಸಿರುವ ಮಾಹಿತಿ ಶಾಸನದಲ್ಲಿ ಕಂಡು ಬಂದಿದೆ.
ಸ್ಥಳೀಯರು ಶಾಸನದ ಮಹತ್ವ ಅರಿಯದೆ ಸರೋವರದ ಮೇಲೆ ದಾಟುಗಲ್ಲಾಗಿ ಬಳಸಿಕೊಂಡಿರುವುದು, ಹಾಗೂ ಕೆಲವರು ಬಟ್ಟೆ ತೊಳೆಯಲು ಬಳಸುತ್ತಿರುವದು ಗಮನಕ್ಕೆ ಬಂದಿದೆ. ಈ ಸರೋವರ ಇರುವ ಜಾಗವು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುತ್ತಿದ್ದು, ಗ್ರಾಮಾಧಿಕಾರಿಯ ಅನುಮತಿ ಪಡೆದು ಶಾಸನವನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ ಪ್ರವಾಸಿಗರಿಗೆ ಪ್ರದರ್ಶನಕ್ಕಿಡಲು ಕ್ರಮಕೈಗೊಳ್ಳಲಾಗುವುದು, ಎಂದು ಕಾಶೀ ಜಗದ್ಗುರುಗಳುವಿಜಯವಾಣಿಮೂಲಕ ಕನ್ನಡಿಗರಿಗೆ ಭರವಸೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 11 =
Remember me
