ಬೆಂಗಳೂರು:ರೌಡಿ ಶೀಟರ್ ಸೈಲೆಂಟ್ ಸುನೀಲ್ ಬಿಜೆಪಿಯ ಪ್ರಮುಖ ನಾಯಕರ ಜತೆ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಕಾಣಿಸಿಕೊಂಡ ವಿಚಾರವಾಗಿ ಇತ್ತೀಚೆಗೆ ವಿವಾದ ಉಂಟಾಗಿತ್ತು. ಮಾತ್ರವಲ್ಲ, ಆತ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ಗಾಗಿ ಪ್ರಯತ್ನಿಸುತ್ತಿರುವುದು ಕೂಡ ಬೆಳಕಿಗೆ ಬಂದಿತ್ತು.
ಇದನ್ನೂ ಓದಿ:ಮತ್ತೆ ‘ಸೈಲೆಂಟ್’ ಸದ್ದು: ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!
ಆದರೆ ಇದೀಗ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್, ನಿವೃತ್ತ ಐಪಿಎಸ್​ ಅಧಿಕಾರಿ ಭಾಸ್ಕರ್ ರಾವ್ ಅವರ ಪಾಲಾಗಿದೆ. ಈ ವಿಷಯ ಪ್ರಕಟಗೊಂಡು ಟಿಕೆಟ್ ಕೈತಪ್ಪಿರುವುದು ಖಚಿತವಾಗುತ್ತಿದ್ದಂತೆ ಸೈಲೆಂಟ್ ಸುನೀಲ್ ಬೆಂಬಲಿಗರು ಬೆಂಗಳೂರಿನ ಬಿಜೆಪಿ ರಾಜ್ಯ ಕಚೇರಿಗೆ ನುಗ್ಗಿ ಗಲಾಟೆ ಮಾಡಿದ್ದೂ ನಡೆದಿದೆ. ಪಕ್ಷಕ್ಕಾಗಿ ದುಡಿದಿದ್ದ ಸುನಿಲ್​ಗೆ ಟಿಕೆಟ್ ಯಾಕೆ ನೀಡಿಲ್ಲ ಎಂದು ಆತನ ಬೆಂಬಲಿಗರು ಈ ಸಂದರ್ಭದಲ್ಲಿ ಪ್ರಶ್ನಿಸಿ ಗದ್ದಲ ಎಬ್ಬಿಸಿದ್ದರು.
ಇದನ್ನೂ ಓದಿ:ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಫೈಟರ್ ರವಿ
ಇಂದು ಇದೇ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಚಾಮರಾಜಪೇಟೆ ಟಿಕೆಟ್ ಕುರಿತು ಬಿಜೆಪಿ ಕಚೇರಿಯಲ್ಲಿ ಸೈಲೆಂಟ್ ರವಿ ಬೆಂಬಲಿಗರ ಪ್ರತಿಭಟನೆ ವಿಚಾರವಾಗಿ ಇಂದು ಮಾಧ್ಯಮದವರ ಜತೆ ಮಾತನಾಡಿರುವ ರಾಜ್ಯಾಧ್ಯಕ್ಷರು, ಸುನೀಲ್ ನಮ್ಮ ಪಾರ್ಟಿಯ ಸದಸ್ಯನೇ ಅಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಪ್ರತಿಭಟನೆ ನಡೆಸಿದವರಿಗೂ ಅದನ್ನೇ ಹೇಳಿದ್ದಾಗಿ ಅವರು ತಿಳಿಸಿದ್ದಾರೆ.
ಸಿದ್ದರಾಮಯ್ಯಗೆ ವಾಯುಯಾನ ಕಂಟಕ?; ನಿನ್ನೆ ವಿಮಾನ, ಇಂದು ಹೆಲಿಕಾಪ್ಟರ್​ ಪ್ರಯಾಣದಲ್ಲಿ ಸಮಸ್ಯೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 1 =
Remember me
