ಬೆಂಗಳೂರು:ಕಾಟೇರ’ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ.
ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್‌ಲ್ಯಾಗ್‌ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಸೇರಿ 8 ಮಂದಿಗೆ ನೋಟಿಸ್‌ ಜಾರಿಯಾಗಿತ್ತು.
ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
8 ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್  ಸೇರಿ ಎಲ್ಲರಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + three =
Remember me
