ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನಳಿನ್​ಕುಮಾರ್ ಕಟೀಲ್ ಅವರೊಬ್ಬರು ಮಾತ್ರವೇ ನಾಮಪತ್ರ ಸಲ್ಲಿಸಿರುವ ಕಾರಣ ಅವರ ಅವಿರೋಧ ಆಯ್ಕೆಯನ್ನು ಗುರುವಾರ ಅಧಿಕೃತವಾಗಿ ಘೋಷಣೆ ಮಾಡಲಾಗುವುದು.
ಬಿಜೆಪಿ ಕಚೇರಿಯಲ್ಲಿ ರಾಜ್ಯ ಚುನಾವಣಾಧಿಕಾರಿಯಾಗಿದ್ದ ಸಚಿವ ಸಿ.ಟಿ.ರವಿ ಈ ಘೋಷಣೆ ಮಾಡಲಿದ್ದಾರೆ. ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕಾರ ಮಾಡಿದ ಬಳಿಕ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಂಸದ ನಳಿನ್​ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಿ ಹೈಕಮಾಂಡ್ ಆದೇಶ ಹೊರಡಿಸಿತ್ತು.
ಬಿಜೆಪಿ ಸಾಂಸ್ಥಿಕ ಚುನಾವಣೆಗಳು ಘೋಷಣೆಯಾದ ಹಿನ್ನೆಲೆ ಅಧ್ಯಕ್ಷ ಹುದ್ದೆಗೆ ನಿಯಮಾವಳಿ ಪ್ರಕಾರವೇ ನಾಮಪತ್ರ ಸಲ್ಲಿಸಿ, ಚುನಾವಣೆ ಪ್ರಕ್ರಿಯೆ ಮೂಲಕ ಆಯ್ಕೆಯಾಗಬೇಕು ಎನ್ನುವ ನಿಯಮಾವಳಿ ಇರುವುದರಿಂದ ಈಗ ಕಟೀಲ್ ಅಧ್ಯಕ್ಷರಾಗಿ ಮತ್ತೊಮ್ಮೆ ಆಯ್ಕೆಗೊಳ್ಳಲಿದ್ದಾರೆ.
ಅಭಿನಂದನೆ:ಅರಮನೆ ಆವರಣದಲ್ಲಿ ಗುರುವಾರ ಮಧ್ಯಾಹ್ನ 3ಕ್ಕೆ ನಡೆಯ ಲಿರುವ ಸಮಾರಂಭದಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಲಾಗುವುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
