ಮಂಗಳೂರು:ಬಾಲಿವುಡ್​ ನಟಿ ಕತ್ರಿನಾ ಕೈಫ್ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಕೊರಗಜ್ಜನ ಕುರಿತು ಬಾಲಿವುಡ್​ಮಂದಿಗೆ ವಿಶೇಷ ನಂಬಿಕೆ ಸೃಷ್ಟಿ ಆಗಿದೆ. ಇದಕ್ಕೆ ಕಾರಣ ಆಗಿರೋದು ಬಾಲಿವುಡ್​​ನಲ್ಲಿ ಇರುವ ಕರಾವಳಿ ಮೂಲದ ಮಂದಿ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್​ನ ಉಳಿದವರಿಗೂ ಈ ಬಗ್ಗೆ ನಂಬಿಕೆ ಮೂಡಿದೆ.
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟ ಡಾ. ಶಿವರಾಜ್‌ಕುಮಾರ್, ರಕ್ಷಿತ್ ಪ್ರೇಮ್, ರಚಿತಾ ರಾಮ್ ಸೇರಿದಂತೆ ದೊಡ್ಡ ತಾರ ಬಳಗ ಆಗಾಗ ಭೇಟಿ ನೀಡುತ್ತಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಮುನ್ನ ದರ್ಶನ್‌ ಮಾರ್ಚ್‌ ತಿಂಗಳಿನಲ್ಲಿ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.  ಇದೀಗ ಕತ್ರಿನಾ ಕೈಫ್‌ ಸ್ವಾಮಿ ಕೊರಗಜ್ಜ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ. ಸುನೀಲ್ ಶೆಟ್ಟಿ ಅವರು ಮಂಗಳೂರು ಮೂಲದವರು.
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಅವರು ಮಂಗಳೂರಿಗೆ ಭೇಟಿ ನೀಡಿರುವ ಫೋಟೋಗಳು ವೈರಲ್ ಆಗಿದೆ.
ಮಹಿ​ನ 49.3 ಮಿಲಿಯನ್ ಜನ ಫಾಲೋ ಮಾಡಿದ್ರೆ..ಇವ್ರು ಮಾತ್ರ ಈ 4 ಮಂದಿನಾ ಹಿಂಬಾಲಿಸ್ತಾರೆ! ಇವ್ರು ಧೋನಿಗೆ ಸಖತ್​ ಸ್ಪೆಷಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + two =
Remember me
