ಬೆಂಗಳೂರು:ಆಸ್ತಿ ನೋಂದಣಿ ಪ್ರಕ್ರಿಯೆಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವುದಕ್ಕಾಗಿ ರೂಪಿಸಿರುವ ಕಾವೇರಿ-2 ತಂತ್ರಾಂಶವನ್ನು ನ.1ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಪ್ರಕಟಿಸಿದ್ದಾರೆ.
ಚಿಂಚೋಳಿಯಲ್ಲಿ ಪ್ರಾಯೋಗಿಕವಾಗಿ ಕಾವೇರಿ-2 ತಂತ್ರಾಂಶ ಜಾರಿ ಮಾಡಲಾಗಿತ್ತು, ಅಲ್ಲಿ ಯಶಸ್ವಿಯಾದ ಕಾರಣ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತಿದೆ. ಆಸ್ತಿ ನೋಂದಣಿಗಾಗಿ ಜನ ನೋಂದಣಾಧಿಕಾರಿಗಳ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕೇವಲ ಐದೇ ನಿಮಿಷಗಳ ನೋಂದಣಿ ಆಗುವಂತೆ ಕಾವೇರಿ ತಂತ್ರಾಂಶ ರೂಪಿಸಲಾಗಿದೆ. ಮನೆಯಲ್ಲಿಯೇ ಕುಳಿತು ನೋಂದಣಿ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಅರ್ಜಿ ಜತೆ ದಾಖಲೆ ಸಲ್ಲಿಸಿದರೆ ಉಪನೋಂದಣಾಧಿಕಾರಿಗಳು ಅವುಗಳನ್ನು ಪರಿಶೀಲಿಸುತ್ತಾರೆ. ಅದರಲ್ಲಿ ಏನಾದರೂ ಕೊರತೆ, ಅರ್ಜಿಯಲ್ಲಿ ತಪ್ಪಿದ್ದರೆ ಅರ್ಜಿದಾರರಿಗೆ ಮಾಹಿತಿ ಮತ್ತು ಸಮಯಾವಕಾಶ ನೀಡುತ್ತಾರೆ. ಸರಿಪಡಿಸಿದ ನಂತರ ನೋಂದಣಿಯಾಗುತ್ತದೆ. ದಾಖಲೆಗಳನ್ನು ಸರಿಪಡಿಸಿದ ನಂತರ ನೋಂದಣಿಗೆ ಸಮಯ ನಿಗದಿ ಮಾಡಲಾಗುತ್ತದೆ. ಆ ಸಮಯಕ್ಕೆ ಹೋದರೆ 20 ನಿಮಿಷದಲ್ಲಿ ಸಹಿ ಹಾಗೂ ಹೆಬ್ಬೆಟ್ಟು ಗುರುತು ಪಡೆದು ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.
ತಿದ್ದುಪಡಿ ಕಾಯ್ದೆ:ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ರೈತರು ಒತ್ತುವರಿ ಮಾಡಿರುವ ಒಂದು ಲಕ್ಷ ಎಕರೆಗೂ ಹೆಚ್ಚಿನ ಭೂಮಿಯನ್ನು ಅವರಿಗೇ ಗುತ್ತಿಗೆ ಆಧಾರದ ಮೇಲೆ ನೀಡುವ ಸಂಬಂಧ ಕಾಯ್ದೆಗೆ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಾಡಲಾಗುವುದು ಎಂದು ಅಶೋಕ್ ತಿಳಿಸಿದರು. ಇದೇ ರೀತಿ ಭೂ ಪರಿವರ್ತನೆ ಕಾರ್ಯವನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶದ ತಿದ್ದುಪಡಿ ಮಸೂದೆಯನ್ನು ಸಿದ್ದಪಡಿಸಲಾಗಿದ್ದು, ಅದನ್ನೂ ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.
ಮೂಲಸೌಕರ್ಯ ಅಭಿವೃದ್ಧಿ:ಸಾಮಾನ್ಯ ನಾಗರಿಕರಿಗೆ ಅನುಕೂಲವಾಗುವ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಮೂಲ ಸೌಕರ್ಯಗಳನ್ನು ಮುಂದಿನ ಮೂರು ತಿಂಗಳೊಳಗೆ ಸರಿಪಡಿಸಲು ಸೂಚಿಸಿ ಆದೇಶ ಹೊರಡಿಸಲಾಗಿದೆ. ನೋಂದಣಾಧಿಕಾರಿಗಳ ಕಚೇರಿಗಳ ಪೈಕಿ 36 ಕಡೆ ಶೌಚಗೃಹ, 28 ಕಡೆ ಕುಡಿಯುವ ನೀರು, 202 ಕಡೆ ಲಿಫ್ಟ್, 135 ಕಡೆ ರ್ಯಾಂಪ್, 2 ಕಡೆ ಆಸನ ವ್ಯವಸ್ಥೆ, 58 ಕಡೆ ವಾಹನ ರ್ಪಾಂಗ್ ಸಮಸ್ಯೆ ಇದೆ. ಈ ಎಲ್ಲ ಸೌಕರ್ಯವನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಅಶೋಕ್ ತಿಳಿಸಿದರು.
ನೋಂದಣಿಗೆ ಶೇ.10 ವಿನಾಯಿತಿ ನೀಡಿದ್ದರಿಂದ ಕಳೆದ ಮೂರು ತಿಂಗಳಲ್ಲಿ 6,700 ಕೋಟಿ ರೂ.ಗಳಿಗೂ ಅಧಿಕ ಹಣ ಬಂದಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಅವಧಿಯಲ್ಲಿ 1,900 ಕೋಟಿ ರೂ. ಹೆಚ್ಚುವರಿ ಸಂಗ್ರಹವಾಗಿದ್ದು, ಇತಿಹಾಸದಲ್ಲೇ ಇದು ದಾಖಲೆ.
|ಆರ್. ಅಶೋಕ್ಕಂದಾಯ ಸಚಿವ
ಭೂ ಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ವಿನಾಯಿತಿ ನೀಡಲಾಗುವುದು. ನಗರ ಪ್ರದೇಶದ ಪ್ರಕರಣಗಳ ವಿಷಯದಲ್ಲಿ ಯಥಾಸ್ಥಿತಿ ಮುಂದುವರಿಯಲಿದೆ. ಕಂದಾಯ ಇಲಾಖೆ ಅಧಿಕಾರಿಗಳೇ ವ್ಯಾಜ್ಯ ಬಗೆಹರಿಸಲಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ 7ರಿಂದ 8 ಕಾಯ್ದೆಗಳಿಗೆ ಅನುಮೋದನೆ ಪಡೆಯಲು ಚಿಂತನೆ ನಡೆಸಿದ್ದೇವೆ.
|ಜೆ.ಸಿ. ಮಾಧುಸ್ವಾಮಿ, ಕಾನೂನು ಮತ್ತು ಸಂಸದೀಯ ಸಚಿವ
ಡಿಜಿಲಾಕರ್​ನಲ್ಲಿ ದಾಖಲೆ ಲಭ್ಯ:ನೋಂದಣಿ ಪ್ರಕ್ರಿಯೆ ಮುಗಿದ ನಂತರ ದಾಖಲೆಗಳನ್ನು ಡಿ.ಜಿ. ಲಾಕರ್​ಗೆ ರವಾನಿಸಲಾಗುತ್ತದೆ. ಕಚೇರಿಯಲ್ಲಿ ಕಾಯ್ದು ಕುಳಿತುಕೊಳ್ಳುವ ಅಗತ್ಯ ಇರುವುದಿಲ್ಲ. ಸುರಕ್ಷತೆ ದೃಷ್ಟಿಯಿಂದಲೂ ಇದೊಂದು ಒಳ್ಳೆಯ ಕ್ರಮವಾಗಿದೆ ಎಂದು ಅಶೋಕ್ ಅಭಿಪ್ರಾಯಪಟ್ಟರು. ಡಿ.ಜಿ. ಲಾಕರ್​ನಲ್ಲಿ ದಾಖಲೆ ಇರುವುದರಿಂದ ಬೇರೆಯವರು ದಾಖಲೆಗಳನ್ನು ದುರುಪಯೋಗ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಸಚಿವ ಅಶೋಕ್ ಹೇಳಿದರು.
ನಿದ್ರೆ ಬರುತ್ತಿಲ್ಲ ಎಂದು ಬೇಸತ್ತು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + three =
Remember me
