ಮಂಡ್ಯ:ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ನಾಳಿನ ಮಂಡ್ಯ ಬಂದ್​ಗೆ ಜೆಡಿಎಸ್​ ಹಾಗೂ ಬಿಜೆಪಿ ನಾಯಕರು ಸಾಥ್ ಕೊಡಲಿದ್ದಾರೆ. ಈ ಮೂಲಕ ಕಾವೇರಿ ಹೋರಾಟದಲ್ಲೂ ಮೈತ್ರಿಯ ಅನಾವರಣ ಆಗಲಿದೆ.
ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಎನ್​ಡಿಎ ಜತೆ ಜೆಡಿಎಸ್​ ಮೈತ್ರಿ ನಿರ್ಧಾರವನ್ನು ಪ್ರಕಟಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳಿನ ಮಂಡ್ಯ ಬಂದ್​ನಲ್ಲಿ ಭಾಗವಹಿಸಲಿದ್ದಾರೆ.
ಅವರು ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ವಾಪಸಾಗಲಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೇ ನೇರವಾಗಿ ಮಂಡ್ಯಕ್ಕೆ ತೆರಳಲಿದ್ದಾರೆ. ಅಲ್ಲಿ ರೈತ ಹಿತರಕ್ಷಣಾ ವೇದಿಕೆ ಕರೆ ಕೊಟ್ಟಿರುವ ಮಂಡ್ಯ ಬಂದ್​ನಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ರೈತರೊಂದಿಗೆ ಅವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮತ್ತೊಂದೆಡೆ ಬಿಜೆಪಿಯ ಮಾಜಿ ಸಚಿವ ಸಿ.ಟಿ.ರವಿ ಕೂಡ ಮಂಡ್ಯದಲ್ಲಿನ ನಾಳಿನ ಪ್ರತಿಭಟನೆಯಲ್ಲಿ ಭಾಗಿ ಆಗಲಿದ್ದಾರೆ. ಮಂಡ್ಯದ ಸಂಜಯ ವೃತ್ತದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸಿ.ಟಿ.ರವಿ ಉಪಸ್ಥಿತರಿರುವರು. ಅಲ್ಲದೆ ಮಂಡ್ಯದ ಜೆಡಿಎಸ್ ಮಾಜಿ ಶಾಸಕರು, ಕಾಂಗ್ರೆಸ್​​ನ ಕೆಲ ನಾಯಕರು ಕೂಡ ಹೋರಾಟಕ್ಕೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕಾವೇರಿ ಪರ ಕೂಗಿಗೆ ದನಿಗೂಡಿಸಿದ ಉಪೇಂದ್ರ; ಉಪ್ಪಿ ಆಶಯ ಏನು?
ಕಾವೇರಿ ನದಿ ನೀರು ವಿವಾದ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರದ ತಪ್ಪಿನಿಂದ ರಾಜ್ಯದ ಜನರು ದೊಡ್ಡ ಪ್ರಮಾಣದ ಜಲ ಸಂಕಷ್ಟಕ್ಕೆ ತುತ್ತಾಗಲಿದ್ದಾರೆ ಎಂದಿದ್ದಾರೆ. ಈಗಾಗಲೇ ಭೀಕರ ಜಲಕ್ಷಾಮದ ಎಲ್ಲ ಲಕ್ಷಣಗಳು ಗೋಚರವಾಗುತ್ತಿವೆ. ಆದರೂ ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ಹೀಗಾಗಿ ಜನರು ಹೋರಾಟಕ್ಕೆ ಮುಂದಾಗಿದ್ದಾರೆ. ಜನರ ಜತೆ ನಿಲ್ಲುವುದು ನನ್ನ ಕರ್ತವ್ಯ. ಆದ್ದರಿಂದ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಪಕ್ಷಗಳನ್ನು KD ಎಂದು ಹೊಸ ಮೈತ್ರಿ ವಿರುದ್ಧ ಕಿಡಿ ಕಾರಿದ ಕಾಂಗ್ರೆಸ್​

ಸಿದ್ದರಾಮಯ್ಯಗೆ ಅಡುಗೆ ಮಾಡಲು ಬರುತ್ತಾ? ಹೆಂಡ್ತಿ ಹತ್ರ ಸಿಎಂ ಯಾವತ್ತಾದ್ರೂ ಬೈಸಿಕೊಂಡಿದ್ರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
