
ಬೆಂಗಳೂರು:ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳಿಗೆ ಹರಿದು ಬರುತ್ತಿರುವ ಒಟ್ಟು ನೀರಿನ ಪ್ರಮಾಣ 2 ಸಾವಿರ ಕ್ಯೂಸೆಕ್‌ಗೆ ತಗ್ಗಿದೆ. ಅಷ್ಟೆ ಪ್ರಮಾಣದ ನೀರನ್ನು ತಮಿಳುನಾಡಿಗೆ ನಿತ್ಯ ಹರಿಸಲಾಗುತ್ತಿದೆ.ಕೆಆರ್‌ಎಸ್, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿದ್ದು, ಜಲಾಶಯಗಳಿಗೆ 40571 ಕ್ಯೂಸೆಕ್ ನೀರು ಒಳಹರಿವಿತ್ತು. ಆಗ ನಾಲ್ಕು ಡ್ಯಾಂಗಳಲ್ಲಿ 113 ಟಿಎಂಸಿ ನೀರು ಸಂಗ್ರಹವಿತ್ತು. ಈ ವರ್ಷ ಅರ್ಧದಷ್ಟು ಅಂದರೆ 65 ಟಿಎಂಸಿ ಮಾತ್ರ ಸಂಗ್ರಹವಿದೆ.ಜಲಾಶಯಗಳಿಂದ ಈ ತನಕ ನೀರಾವರಿ ಉದ್ದೇಶಕ್ಕೆ ಹಾಗೂ ತಮಿಳುನಾಡಿಗೆ ಹರಿಸಲು 42 ಟಿಎಂಸಿ ನೀರು ಪಡೆಯಲಾಗಿದೆ.ಕೆಆರ್‌ಎಸ್‌ನಲ್ಲಿ ಕಳೆದ ವರ್ಷ 49 ಟಿಎಂಸಿ ನೀರು ಸಂಗ್ರಹವಿತ್ತು. ಈ ವರ್ಷ ಕೇವಲ 23 ಟಿಎಂಸಿ ನೀರು ಸಂಗ್ರಹವಿದೆ. ಇನ್ನುಳಿದ ಜಲಾಶಯಗಳ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಯೇನೂ ಇಲ್ಲ.
ಮೆಟ್ಟೂರು ಪರಿಸ್ಥಿತಿ:ತಮಿಳುನಾಡಿನ ಮೆಟ್ಟೂರು ಜಲಾಶಯ 95 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಕಳೆದ ವರ್ಷ 93 ಟಿಎಂಸಿ ನೀರಿತ್ತು. ಈ ವರ್ಷ 18 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿದೆ. ರಾಜ್ಯದಿಂದ ಹರಿಸಲಾಗುತ್ತಿರುವ ನೀರನ್ನು ಕುರುವೈ ಬೆಳೆಗೆ ಬಳಸಿಕೊಳ್ಳುತ್ತಿದೆ. ಇನ್ನು ಭವಾನಿ ಜಲಾಶಯದಲ್ಲಿ 11 ಟಿಎಂಸಿ ನೀರು ಸಂಗ್ರಹವಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + fifteen =
Remember me
