ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸಂಬಂಧ ವಾತಾವರಣ ಕಾವೇರಿರುವ ಸಂದರ್ಭದಲ್ಲಿ ಜಲಸಂಪನ್ಮೂಲ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದಂತೆ ಬಿಡಬೇಕಾದ ಮೂರು ಸಾವಿರ ಕ್ಯೂಸೆಕ್ ನೀರಿನಲ್ಲಿ ಕೆಆರ್‌ಎಸ್ ನಿಂದ ಒಂದು ಹನಿ ನೀರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದರು.
ಎರಡು ಸಾವಿರ ಕ್ಯೂಸೆಕ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. ಒಂದು ಸಾವಿರ ಕ್ಯೂಸೆಕ್ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ರಾಜಿಯಾಗುವುದಿಲ್ಲ. ಮಂಡ್ಯ ಭಾಗದ ರೈತರ ಹಿತ ಮುಖ್ಯ ಎಂದರು.
ಮೇಕೆದಾಟು ಯೋಜನೆ ಬೇಕು ಎಂದು ವಿರೋಧ ಪಕ್ಷದವರು ಅಧಿಕಾರಿಗಳಿಗೆ ಅರ್ಜಿ ಕೊಟ್ಟಿದ್ದಾರೆ. ಇಲ್ಲಿ ಕೊಟ್ಟರೆ ಏನು ಪ್ರಯೋಜನ, ಮಾಜಿ ಪ್ರಧಾನಿ ದೇವೇಗೌಡರು ಮೋದಿಗೆ ಪತ್ರ ಬರೆದಿದ್ದಾರೆ. ನೀವು ದೆಹಲಿಯಲ್ಲಿ ಹೋರಾಟ ಮಾಡಿ, ಇಲ್ಲಿ ಮಾಡಿದರೆ ಏನು ಪ್ರಯೋಜನ? ಎಂದು ಹೇಳಿದರು.
ಸುಪ್ರೀಂಕೋರ್ಟ್ ಕೂಡ ಮೌಖಿಕವಾಗಿ ಮೇಕೆದಾಟು ಯೋಜನೆಗೆ ಪೂರಕವಾಗಿ ಮಾತನಾಡಿದೆ. 26 ಜನ ಸಂಸದರು ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಪರವಾಗಿ ಮಾತನಾಡಿದರು. ಅದರಂತೆ ಈಗ ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಎಂದು ಆಗ್ರಹಿಸಿದರು.
ತಮಿಳುನಾಡಿನ ಜತೆ ಡಿ.ಕೆ.ಶಿವಕುಮಾರ್ ಅವರು ಮಾತುಕತೆ ನಡೆಸುತ್ತಿಲ್ಲ ಎಂದು ಕುಮಾರಸ್ವಾಮಿ ಅವರ ಆರೋಪಕ್ಕೆ ರಾಜ್ಯದ ಹಿತಕ್ಕೆ ಎರಡು ಪಕ್ಷಗಳು ಒಂದಾಗಿದ್ದಾರೆ, ಈಗಲೂ ರಾಜ್ಯದ ಹಿತಕ್ಕೆ ಮೇಕೆದಾಟು ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ತರಲಿ, ಮೂರು ವರ್ಷದಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮುಗಿಸುತ್ತೇನೆ ಎಂದರು.
ಅಂದಹಾಗೆ, ಆಣೆಕಟ್ಟೆ ಕೆಳಗಿನ ಕಾವೇರಿ ಜಲಾನಯನ ಪ್ರದೇಶದಿಂದ ಸಾಮಾನ್ಯವಾಗಿ 2000 ಕ್ಯೂಸೆಕ್ಸ್ ಹರಿದು ಹೋಗುತ್ತಿರುತ್ತದೆ. 1000 ಸಾವಿರ ಕ್ಯೂಸೆಕ್ಸ್ ಬಿಡಬೇಕಾಗುತ್ತದೆ. ಕನಕಪುರ, ಬೆಂಗಳೂರು ಕಡೆಯ ಮಳೆ ನೀರು ಹೋಗುತ್ತಾ ಇರುತ್ತದೆ. ಎರಡು ಮೂರು ದಿನದಿಂದ ಒಳಹರಿವು ಕೂಡ ಚನ್ನಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eleven + 16 =
Remember me
