ಬೆಂಗಳೂರು: ಕಾವೇರಿ ಜಲ ವಿವಾದದ ಕಾವು ಜೋರಾಗಿದೆ. ಈ ನಡುವೆ ಕರ್ನಾಟಕದಿಂದ ಕಾವೇರಿ ತಮಿಳುನಾಡಿಗೆ ಹರಿಯುತ್ತಲೇ ಇದ್ದಾಳೆ. ಹಾಗಿದ್ದರೆ ಯಾವ ಪ್ರಮಾಣದಲ್ಲಿ ನೀರು ಹರಿಸಲಾಗಿದೆ ಎಂಬ ಕುತೂಹಲ ಜನ ಸಾಮಾನ್ಯರಲ್ಲಿ ಸಹಜ.ಬುಧವಾರ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಕಾವೇರಿ ಕಣಿವೆಯ ನಾಲ್ಕು ಜಲಾಶಯಗಳಲ್ಲಿನ ಬುಧವಾರದ ಒಟ್ಟಾರೆ ಲೈವ್ ಸ್ಟೋರೇಜ್ 53.287 ಟಿಎಂಸಿ ಇದ್ದು, ಹಿಂದಿನ ವರ್ಷ ಇದೇ ದಿನದಂದು ಲೈವ್ ಸ್ಟೋರೇಜ್ 103.348 ಟಿಎಂಸಿ ಆಗಿತ್ತು. ಕಳೆದ 30 ವರ್ಷಗಳ ಸರಾಸರಿಗೆ ಹೋಲಿಸಿದಲ್ಲಿ ನೀರಿನ ಒಳಹರಿವಿನಲ್ಲಿ ಒಟ್ಟಾರೆ ಕೊರತೆ ಶೇ.54 ಆಗಿರುತ್ತದೆ. ಪ್ರಸಕ್ತ ಜಲವರ್ಷದಲ್ಲಿ ತಮಿಳುನಾಡಿಗೆ ಜೂನ್1ರಿಂದ ಸೆ.11ರವರೆಗೆ ಒಟ್ಟು 37.718 ಟಿಎಂಸಿ ನೀರು ಹರಿದಿದೆ.ಸಾಮಾನ್ಯ ವರ್ಷದಲ್ಲಿ ಕಾವೇರಿ ಟ್ರಿಬ್ಯೂನಲ್ ಆದೇಶದನ್ವಯ ಇದೇ ಅವಧಿಯಲ್ಲಿ 99.860 ಟಿಎಂಸಿ ನೀರನ್ನು ಬಿಡಬೇಕಾಗಿತ್ತು. ಕಳೆದ ವರ್ಷ ನಿಗದಿತ 177.75 ಟಿಎಂಸಿ ಪ್ರಮಾಣಕ್ಕೆ ಎದುರಾಗಿ 650 ಟಿಎಂಸಿಗಿಂತ ಅಧಿಕವಾಗಿ ನೀರನ್ನು ಬಿಡಲಾಗಿದೆ ಎಂದು ಸರ್ಕಾರ ವಿವರಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen + eighteen =
Remember me
