ಬೆಂಗಳೂರು:ಪ್ರತಿನಿತ್ಯ 10 ಸಾವಿರ ಕ್ಯೂಸೆಕ್ಸ್‌ನಂತೆ 15 ದಿನ ಕಾಲ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೃಷ್ಣ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ನಮ್ಮಲ್ಲಿ ಮಳೆ ಕೊರತೆಯಿಂದ ನೀರಿನ ಅಭಾವ ಹೆಚ್ಚಾಗಿದೆ. ಆದರೂ ಆರಂಭದಲ್ಲಿ ನಾವು ತಮಿಳುನಾಡಿಗೆ ನೀರು ಹರಿಸಿದ್ದೇವೆ. ಆದರೂ ಅವರನ್ನು ತೃಪ್ತಿಪಡಿಸಲು ಆಗುತ್ತಿಲ್ಲ. ನಮಗೆ ಕೃಷಿ ಉದ್ದೇಶಕ್ಕಿಂತ ಕುಡಿಯುವ ಉದ್ದೇಶಕ್ಕೆ ನೀರು ಇಟ್ಟುಕೊಳ್ಳುವುದು ಮುಖ್ಯವಾಗಿದೆ. ಈ ಹಿನ್ನೆನಲೆಯಲ್ಲಿ ಪ್ರಾಧಿಕಾರಕ್ಕೆ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.
ಕುಮಾರಸ್ವಾಮಿಯವರು ಸರ್ವಪಕ್ಷ ಸಭೆ ಕರೆಯುವಂತೆ ಆಗ್ರಹಿಸಿರುವ ಕುರಿತ ಪ್ರಶ್ನೆಗೆ, ಕುಮಾರಸ್ವಾಮಿ ಅವರು ಸರ್ವ ಪಕ್ಷ ಸಭೆ ಕರೆಯುವ ಬಗ್ಗೆ ಕೇಳಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣ ಸೇರಿದಂತೆ ರಾಜ್ಯದ ಪ್ರಮುಖ ವಿಚಾರಗಳ ಬಗ್ಗೆ ಸರ್ವ ಪಕ್ಷಗಳ ಜತೆ ಚರ್ಚೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ನಾವು ಕೂಡ ಸರ್ವಪಕ್ಷ ಸಭೆ ನಡೆಸುವ ಬಗ್ಗೆ ಆಲೋಚನೆ ಮಾಡಿದ್ದೇವೆ.
ಬೊಮ್ಮಾಯಿಯವರು ಕೂಡ ತಮಿಳುನಾಡಿಗೆ ನೀರು ಬಿಡಬಾರದು ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಅವರ ಸರ್ಕಾರ ಇದ್ದಾಗಲೂ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ದೇವೇಗೌಡರು ಪ್ರಧಾನಿಯಾಗಿದ್ದಾಗಲೂ ನೀರು ಬಿಡಲಾಗಿತ್ತು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ನೀರು ಬಿಡಲಾಗಿತ್ತು. ಈ ಬಗ್ಗೆ ದಾಖಲೆಗಳಿವೆ. ಈ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
