ಮಂಗಳೂರು:ಮಂಗಳೂರಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಹನುಮಂತ ನಾಯ್ಕ(38) ಅವರು ಹೃದಯಾಘಾತದಿಂದ ಇಂದು(ಗುರುವಾರ) ಮುಂಜಾನೆ ಸ್ವಗ್ರಾಮದಲ್ಲಿ ನಿಧನರಾದರು.
ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ ಅವರು ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಸ್ವಗ್ರಾಮಕ್ಕೆ ತೆರಳಿದ್ದ ಹನುಮಂತ ಅವರಿಗೆ ಗುರುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
2008ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ಹನುಮಂತ ನಾಯ್ಕ ಸೇರ್ಪಡೆಗೊಂಡಿದ್ದರು. ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ಸಮಾಜಮುಖಿ ಕೆಲಸ, ದಕ್ಷ ಕೆಲಸದಿಂದಲೇ ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + one =
Remember me
