ಚಿತ್ರದುರ್ಗ:ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿದ್ದರು. ಇದರ ಜೊತೆಗೆ ಅನೇಕ ಜನ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಕಲುಷಿತ ನೀರು ಸೇವಿಸಿದ ಪರಿಣಾಮ ಚಿಕ್ಕಪುರ ಗ್ರಾಮದ ಕರಿಬಸಪ್ಪ(35) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ ಕರಿಬಸಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಇದನ್ನೂ ಓದಿ:ಮುನಿಸು ಶಮನಕ್ಕೆ ಮುಂದಾದ ಸಿಎಂ-ಡಿಸಿಎಂ; ಜಿಲ್ಲಾವಾರು ಶಾಸಕರು, ಸಚಿವರ ಜತೆ ಸಭೆ
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಪುರ ಗ್ರಾಮದ ನಿವಾಸಿ ಕರಿಬಸಪ್ಪ ಜುಲೈ 30 ಹಾಗೂ 31ರಂದು ಕವಾಡಿಗರಹಟ್ಟಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಕವಾಡಿಗರಹಟ್ಟಿಯಲ್ಲಿ ನೀರು, ಆಹಾರ ಸೇವೆನೆಯಿಂದ ಆಗಸ್ಟ್​ 1ರಂದು ಕರಿಬಸಪ್ಪಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕರಿಬಸಪ್ಪರನ್ನೂ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು.
ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ ಕರಿಬಸಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ರಾತ್ರಿ ರೋಗಿಯನ್ನೂ ದಾವಣಗೆರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಕರಿಬಸಪ್ಪ ಸಹೋದರ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one + four =
Remember me
