ಕಲಬುರಗಿ:ಪಿಎಸ್​​​​ಐ, ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್, ಎ1 ಆರೋಪಿ ಆರ್​​​​​ಡಿ ಪಾಟೀಲ್ ಪೊಲೀಸರು ಬರುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿರುವ ವರದಾ ನಗರದಲ್ಲಿನ ಅಪಾರ್ಟ್ಮೆಂಟ್ ಒಂದರಿಂದ ಪರಾರಿಯಾಗಿದ್ದಾನೆ. ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಂಧನಕ್ಕೆ ವಿಳಂಬ ಮಾಡಿದ್ರೆ ಕ್ರಮ ಎಂದ ಖರ್ಗೆಕೆಇಎ ಪರೀಕ್ಷೆಯಲ್ಲಿ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಣದ ಕುರಿತು ಮಾಹಿತಿ ಪಡೆಯುತ್ತೇನೆ. ಅಧಿಕಾರಿಗಳು ವಿಳಂಬ ನೀತಿ ಅನುಸರಿದರೆ ಕ್ರಮ ಖಚಿತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಆರೋಪಿಯನ್ನು ಬಿಡುವ ಪ್ರಶ್ನೆಯೇ ಇಲ್ಲ. ಪದೇ ಪದೆ ಜಾಗ ಬದಲಾಯಿಸುತ್ತಿದ್ದಾನೆ. ಮೊಬೈಲ್, ಸ್ಥಳವನ್ನು ಬದಲಾಯಿಸುತ್ತಿದ್ದಾನೆ. ತನಿಖೆಗೆ ಚುರುಕು ನೀಡಿದ್ದರಿಂದಲೆ ಆರೋಪಿ ಕಣ್ತಪ್ಪಿಸಿಕೊಳ್ಳುತ್ತಿದ್ದಾನೆ. ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿಲ್ಲ. ತನಿಖೆ ಮುಂದುವರಿಸಲಾಗುತ್ತಿದೆ ಎಂದು ಹೇಳಿದರು.
ಅಕ್ರಮದ ಕುರಿತು ರಾಜ್ಯದ ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ತನಿಖೆ ನಡೆಸಿದ್ದು, ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಲ್ಲಿ ತನಿಖೆ ಪೂರ್ಣಗೊಂಡ ನಂತರ ಸಿಐಡಿಗೆ ವಹಿಸುವ ಕುರಿತು ಗೃಹ ಸಚಿವರು ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.
ಮುಂದಿನ ಮೂರು ದಿನ ಭಾರೀ ಮಳೆ; ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
