|ಪಂಕಜ ಕೆ.ಎಂ.ಬೆಂಗಳೂರು
ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ತಡೆಗೆ ಕಠಿಣ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸೂಚನೆ ನೀಡಿದ ಬೆನ್ನಲ್ಲೇ, ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿ ನಿಗಾ ವಹಿಸುವಂತೆ ತಜ್ಞರು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ. ಕರೊನಾ 1 ಹಾಗೂ 2ನೇ ಅಲೆ ನೆರೆಯ ಮಹಾರಾಷ್ಟ್ರ ಹಾಗೂ ಕೇರಳಕ್ಕೆ ಅಪ್ಪಳಿಸಿದ ಬಳಿಕವೇ ಗಡಿಭಾಗಗಳಲ್ಲಿ ಕಾಣಿಸಿಕೊಂಡು ಆ ಬಳಿಕ ರಾಜ್ಯಕ್ಕೆ ವ್ಯಾಪಿಸಿತ್ತು. ಈ ಹಿನ್ನೆಲೆಯಲ್ಲಿ ತಜ್ಞರ ಎಚ್ಚರಿಕೆ ಮಹತ್ವ ಪಡೆದುಕೊಂಡಿದೆ. ಸದ್ಯ ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಅಬ್ಬರ ತಗ್ಗುತ್ತಿದ್ದು, ಮೂರನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ತಯಾರಿ ನಡೆಸಿದೆ. ಇದರ ಬೆನ್ನಲ್ಲೇ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪತ್ತೆಯಾಗಿದೆ. ಈ ರೂಪಾಂತರಿಯು ಮೂರನೇ ಅಲೆಯಾಗಿ ಮಾರ್ಪಟ್ಟರೂ ಅಚ್ಚರಿಯಿಲ್ಲ ಎಂಬ ತಜ್ಞರ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೆರೆ ರಾಜ್ಯಗಳಿಂದ ಸೋಂಕು ಹರಡದಂತೆ ಕಟ್ಟೆಚ್ಚರ ವಹಿಸಬೇಕಿದೆ.
ಒಂದೇ ಸಲ ತೀವ್ರಗೊಳ್ಳಲ್ಲ:ಕೋವಿಡ್ ಎಲ್ಲೆಡೆ ಒಂದೇ ಸಲ ತೀವ್ರಗೊಳ್ಳುವುದಿಲ್ಲ. ಅದೇ ರೀತಿ ದೇಶದಲ್ಲೂ ಒಂದು ರಾಜ್ಯದಲ್ಲಿ ಏರಿಕೆಯಾದರೆ, ಮತ್ತೊಂದು ರಾಜ್ಯದಲ್ಲಿ ಇಳಿಕೆಯಾಗಿರುತ್ತದೆ. ಹಾಗಾಗಿ ರಾಜ್ಯದಲ್ಲಿ ಕೋವಿಡ್ ಪ್ರಕರಣ ಇಳಿಕೆಯಾಗಿದ್ದರೂ ನೆರೆ ರಾಜ್ಯದಲ್ಲಿ ಯಾವಾಗ ಬೇಕಾದರೂ ತೀವ್ರಗೊಳ್ಳಬಹುದು. ಈ ಹಿಂದೆಯೂ ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳಲ್ಲಿ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತೀವ್ರಗೊಂಡಿತ್ತು. ನಂತರ ಕರ್ನಾಟಕದಲ್ಲಿ ಹೆಚ್ಚಾಯಿತು. ಹಾಗಾಗಿ ರಾಜ್ಯದ ಒಳಗೆ ಕ್ರಮ ವಹಿಸಿದರೆ ಸಾಲದು ಹೊರ ರಾಜ್ಯಗಳಿಂದ ಆಗಮಿಸುವವರ ಬಗ್ಗೆ ಹೆಚ್ಚು ಜಾಗರೂಕತೆ ವಹಿಸುವ ಅಗತ್ಯವಿದೆ ಎನ್ನುತ್ತಾರೆ ತಜ್ಞರು.
ನಿಯಮ ಪಾಲಿಸಿ:ಈ ನಡುವೆ ಲಾಕ್​ಡೌನ್ ಬಹುತೇಕ ತೆರವುಗೊಂಡಿರುವುದರಿಂದ ಜನಜೀವನ ಸಹಜಸ್ಥಿತಿಗೆ ಮರಳುತ್ತಿದ್ದು, ಸಂಚಾರ ಹೆಚ್ಚಾಗಿದೆ. ಹಾಗಾಗಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ಇಲ್ಲವಾದಲ್ಲಿ ಆಪತ್ತು ತಪ್ಪಿದ್ದಲ್ಲ. ಇನ್ನೂ ಕೆಲ ದಿನಗಳ ಕಾಲ ಎಚ್ಚರಿಕೆ ವಹಿಸುವ ಅಗತ್ಯವಿದ್ದು, ಅದರಲ್ಲೂ ಗಡಿನಾಡ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸದಿದ್ದರೆ ಅಪಾಯ ಎಂದು ತಜ್ಞರು ಎಚ್ಚರಿಸಿದ್ದಾರೆ.
ಯಾವೆಲ್ಲ ಜಿಲ್ಲೆಗಳಿಗೆ ಆತಂಕ?:ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚು ನಿರ್ಬಂಧ ಅಗತ್ಯವಿದೆ. ಅದೇ ರೀತಿ ಕೇರಳದ ಗಡಿಭಾಗಗಳಾದ ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲೂ ಎಚ್ಚರಿಕೆ ವಹಿಸಬೇಕಿದೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶದಿಂದ ಬರುವ ಮಾರ್ಗಗಳ ಮೇಲೂ ನಿಗಾ ವಹಿಸಬೇಕಿದೆ.
ಹೊರ ರಾಜ್ಯಗಳಿಂದ ಬರುವವರನ್ನು ಕಡ್ಡಾಯವಾಗಿ ಆರ್​ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಬೇಕು. ರೂಪಾಂತರಿ ವೈರಾಣು ಹೆಚ್ಚುತ್ತಿರುವುದರಿಂದ ಹೊರಗಿನವರಲ್ಲಿ ಸೋಂಕು ದೃಢಪಟ್ಟರೆ ಅವರ ಮಾದರಿಗಳನ್ನು ಜಿನೋಮಿಕ್ ಸೀಕ್ವೆನ್ಸಿಸ್ ಪರೀಕ್ಷೆಗೆ ಒಳಪಡಿಸಿ ರೂಪಾಂತರಿ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕಿದೆ.
|ಡಾ. ಸಿ.ಎನ್. ಮಂಜುನಾಥ್ಸದಸ್ಯರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ

ಕರೊನಾ ವೈರಸ್​ನ ರೂಪಾಂತರಿ ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆಯಾದ ಜಿಲ್ಲೆಗಳಲ್ಲಿ ಜನಸಂದಣಿ ನಿಯಂತ್ರಣ, ಟೆಸ್ಟಿಂಗ್, ಟ್ರಾ್ಯಕಿಂಗ್ ಮತ್ತು ವ್ಯಾಕ್ಸಿನೇಷನ್ ಹೆಚ್ಚಿಸುವುದು ಸೇರಿದಂತೆ ತಕ್ಷಣವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸೇರಿ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ಕೊಟ್ಟಿದೆ. ರಾಜ್ಯದಲ್ಲಿ ಮೈಸೂರು ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿರುವುದರಿಂದ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಈ ರೂಪಾಂತರಿ ವೈರಾಣು ಹೆಚ್ಚು ಪ್ರಸರಣದ ಗುಣ ಹೊಂದಿದ್ದು, ಶ್ವಾಸಕೋಶದ ಕೋಶಗಳ ಒಳಭಾಗದಲ್ಲಿ ಬಲವಾಗಿ ಸೋಂಕು ಅಂಟಿಕೊಳ್ಳಲಿದೆ. ಇದು ಮೊನೊಕ್ಲೋನಲ್ ಪ್ರತಿಕಾಯ ಪ್ರತಿಕ್ರಿಯೆಯನ್ನು ಕುಗ್ಗಿಸುತ್ತದೆ. ಆದ್ದರಿಂದ ಈ ಪ್ರಕರಣಗಳು ಕಂಡು ಬರುವ ಪ್ರದೇಶದಲ್ಲಿ ಹೆಚ್ಚು ಕಠಿಣ ಕ್ರಮಗಳನ್ನು ಅನುಸರಿಸಬೇಕು. ಸೋಂಕಿತರು ಹಾಗೂ ಅವರ ಸಂರ್ಪತರನ್ನು ಪರೀಕ್ಷೆಗೆ ಒಳಪಡಿಸಿ ಸೋಂಕು ಪತ್ತೆಯಾದಲ್ಲಿ ಇತರರಿಗೆ ಹರಡದಂತೆ ನಿಗಾದಲ್ಲಿ ಇರಿಸಬೇಕು. ಸೋಂಕಿತರ ಮಾದರಿಗಳನ್ನು ಸಂಗ್ರಹಿಸಿ ತ್ವರಿತವಾಗಿ ಐಘಖಅಇಣಎ ಪರೀಕ್ಷೆಗೆ ಕಳುಹಿಸಬೇಕು ಎಂದು ಸೂಚಿಸಲಾಗಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ತಮಿಳುನಾಡು, ರಾಜಸ್ಥಾನ, ಕರ್ನಾಟಕ, ಪಂಜಾಬ್, ಆಂಧ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಗುಜರಾತ್ ಮತ್ತು ಹರಿಯಾಣಕ್ಕೆ ಪತ್ರ ಬರೆದಿದ್ದಾರೆ.







ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + six =
Remember me
