ಬೆಂಗಳೂರು:ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣ ಸಮಾರಂಭಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನಿಸದೇ ಇರುವ ಬಗ್ಗೆ ಉತ್ತರಿಸಬೇಕಾದವರು ಬಿಜೆಪಿಯವರಾಗಲಿ, ಆರೆಸ್ಸೆಸ್‌ನವರಾಗಲಿ ಅಲ್ಲ, ಇದು ರಾಜ್ಯ ಸರ್ಕಾರದ ಸಮಾರಂಭವಾದ್ದರಿಂದ ಮುಖ್ಯಮಂತ್ರಿ ಮತ್ತು ಮುಖ್ಯ ಕಾರ್ಯದರ್ಶಿ ಉತ್ತರಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಕಟುಶಬ್ದಗಳಲ್ಲಿ ಟೀಕಿಸಿದೆ. ಬಿಜೆಪಿಯನ್ನು ಸುಳ್ ಬಿಜೆಪಿ, ಗೊಬೆಲ್ ಬಿಜೆಪಿ ಹಾಗೂ ಮುಖ್ಯಮಂತ್ರಿಗಳನ್ನು ಸುಳ್ ಸಿಎಂ ಎಂದು ಕರೆದು ಹ್ಯಾಷ್ ಟ್ಯಾಗ್ ಹಾಕಿದೆ. ಅಡಾಲ್ಫ್ ಹಿಟ್ಲರ್ ಸಂಪುಟದಲ್ಲಿ ಇದ್ದ ಮಂತ್ರಿ ಗೊಬೆಲ್ಗೆ ಬಿಜೆಪಿಯನ್ನು ಹೋಲಿಸಿದೆ.
ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಶ್ರೀ@H_D_Devegowdaರನ್ನು ಆಹ್ವಾನಿಸದೆ ರಾಜ್ಯ@BJP4Karnatakaಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ.ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. 1/12#ಸುಳ್_ಬಿಜೆಪಿ#ಸುಳ್_ಸಿಎಂ— Janata Dal Secular (@JanataDal_S)November 13, 2022
ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ಶ್ರೀ@H_D_Devegowdaರನ್ನು ಆಹ್ವಾನಿಸದೆ ರಾಜ್ಯ@BJP4Karnatakaಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ.ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ. 1/12#ಸುಳ್_ಬಿಜೆಪಿ#ಸುಳ್_ಸಿಎಂ
‘ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮ’ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪಿಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ ಎಂದು ಕಟುಟೀಕೆ ಮಾಡಿದೆ.
ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ಬಿಜೆಪಿಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆ ಎಷ್ಟು ಎಂಬುದು ಗೊತ್ತಾಗುತ್ತದೆ ಎಂದು ಜೆಡಿಎಸ್ ಹೇಳಿದೆ.
ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸದ ರಾಜ್ಯ ಬಿಜೆಪಿ ಸರ್ಕಾರದ ನೀತಿ ವಿರೋಧಿಸಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಕೆಂಪೇಗೌಡರ ಬೃಹತ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.1/2pic.twitter.com/yMSbNvPvMU— Janata Dal Secular (@JanataDal_S)November 12, 2022
ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸದ ರಾಜ್ಯ ಬಿಜೆಪಿ ಸರ್ಕಾರದ ನೀತಿ ವಿರೋಧಿಸಿ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಕೆಂಪೇಗೌಡರ ಬೃಹತ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.1/2pic.twitter.com/yMSbNvPvMU
ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ಭೂತದ ಬಾಯಲ್ಲಿ ಭಗದ್ಗೀತೆ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಮಾಡುತ್ತಿದೆ ಎಂದು ಜೆಡಿಎಸ್ ಹೇಳಿದೆ.
ಅರ್ಧದಿನದ ಅರೆಬರೆ ಭೇಟಿಯಲ್ಲಿ ಪ್ರಧಾನಿಗಳು ಮಾಡಿದ್ದಾದರೂ ಏನು? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ಕುಲ ಕುಲವೆಂದು ಹೊಡೆದಾಡದಿರಿ.. ಪದವನ್ನು ಹೇಳುತ್ತಲೇ ಕುಲಕಿಚ್ಚಿನ ರಾಜಕೀಯ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eleven =
Remember me
