ಬೆಂಗಳೂರು:ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್‌ಸೂಚನೆ ನೀಡಿದ 24 ಗಂಟೆಯೊಳಗೆ 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ 6.5 ಎಕರೆ ಭೂಮಿ ವಶಕ್ಕೆ ಪಡೆಯಲಾಗಿದೆ.
ಅರಣ್ಯ ಇಲಾಖೆಯ ಕಾರ್ಯ ಯೋಜನೆಗಳ ಬಗ್ಗೆ ಮಂಗಳವಾರ ಸಭೆ ನಡೆಸಿ ಉನ್ನತಾಧಿಕಾರಿಗಳಿಗೆ ಆದ್ಯತೆಯ ಮೇಲೆ ಒತ್ತುವರಿ ತೆರವು ಮಾಡಲು ಸಚಿವರು ಸೂಚಿಸಿದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆಯೇ ಬಿ.ಎಂ. ಕಾವಲಿನಲ್ಲಿ ಜೆ.ಸಿ.ಬಿ. ವಾಹನಗಳು ಗರ್ಜಿಸಿದವು.
ಬೆಂಗಳೂರು ನಗರ ಡಿ.ಸಿ.ಎ್ ರವೀಂದ್ರಕುಮಾರ್,ಎಸಿಎ್ ಸುರೇಶ್ ಮತ್ತು ಆರ್‌ಎ್ಒ ಗೋವಿಂದರಾಜ್ ಅವರ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಯ ತಂಡ ತೆರವು ಕಾರ್ಯಾಚರಣೆಗಿಳಿದು ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿ, ಅರಣ್ಯ ಭೂಮಿ ವಶಕ್ಕೆ ಪಡೆದು ಗಡಿಯಲ್ಲಿ ಬಿದಿರು ಸೇರಿದಂತೆ ನಾನಾ ಜಾತಿಯ ಮರಗಳನ್ನು ನೆಡುವ ಮೂಲಕ ಮರುವಶಕ್ಕೆ ಪಡೆದರು.
ಈ ಅರಣ್ಯ ಪ್ರದೇಶದಲ್ಲಿ ಸುಮಾರು 6.5 ಎಕರೆಯಷ್ಟು ಭೂಮಿಯನ್ನು ಮಧುಸೂದನಾನಂದ ಸ್ವಾಮಿ ಎಂಬುವವರು ಒತ್ತುವರಿ ಮಾಡಿ, ಮಂಜೂರಾತಿ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಅರಣ್ಯ ಭೂಮಿಯಾದ ಕಾರಣ ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ ಎಂದು ಅರಣ್ಯ ಇಲಾಖೆ ತಿರಸ್ಕರಿಸಿತ್ತು.ಒತ್ತುವರಿದಾರರ ಬಳಿ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ಯಾವುದೇ ಕಂದಾಯ ದಾಖಲೆ, ಕ್ರಯಪತ್ರ, ಮಂಜೂರಾತಿ ಪತ್ರ, ಸಾಗುವಳಿ ಚೀಟಿ ಯಾವುದೂ ಇಲ್ಲದ ಕಾರಣ 2017ರ ಆಗಸ್ಟ್ ನಲ್ಲಿಯೇ ಈ ಒತ್ತುವರಿ ತೆರವಿಗೆ ಎ.ಸಿ.ಎ್. ನ್ಯಾಯಾಲಯ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸಿಸಿಎ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು.
ಡಿ.29,2023ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಿಂಗರಾಜ್ ಅವರು ಈ ಭೂಮಿ ಅರಣ್ಯ ಇಲಾಖೆಗೆ ಸಂಬಂಧಿಸಿದ್ದೆಂದು ಮಹತ್ವದ ಆದೇಶ ನೀಡಿದ್ದರು. ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿರುವ ಮಧುಸೂದನಾನಂದ ಸ್ವಾಮಿ ಎನ್ನುವವರ ವಿರುದ್ಧ ಈಗಾಗಲೇ 5 ಪ್ರಕರಣ ದಾಖಲು ಮಾಡಲಾಗಿದೆ.
ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂ. ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ, ಪರಿಸರ, ಕಾಡು ಮತ್ತು ವನಸಂಪತ್ತು ಉಳಿಸುವುದೇ ಇಲಾಖೆಯ ಕರ್ತವ್ಯವಾಗಿದ್ದು, ಬೆಂಗಳೂರಿನಲ್ಲಿ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿ ತೆರವು ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ.-ಈಶ್ವರ ಖಂಡ್ರೆ, ಅರಣ್ಯ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
