ಕೇರಳ:ನಂದಿನಿಯ ಉತ್ಪನ್ನಗಳು ಕಳಪೆ ಗುಣಮಟ್ಟದ್ದಾಗಿದ್ದು, ಕೇರಳೀಯರು ಅವುಗಳನ್ನು ಖರೀದಿಸಬೇಡಿ ಎಂದು ಕೇರಳ ರಾಜ್ಯ ಪಶುಸಂಗೋಪನಾ ಸಚಿವೆ ಜೆ.ಚಿಂಚುರಾಣಿ ಹೇಳಿದ್ದಾರೆ.ಇದನ್ನೂ ಓದಿ:ಜನರಿಗೆ ಬೇಕಾಗಿರುವುದು ಅಕ್ಕಿ ಹಣ ಅಲ್ಲ; ಸಿ.ಟಿ. ರವಿ ಹೇಳಿಕೆಗೆ ಸಚಿವ ಜಾರ್ಜ್​ ತಿರುಗೇಟುಕರ್ನಾಟಕ ಹಾಲು ಒಕ್ಕೂಟದ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೇರಳದಲ್ಲಿ ವಿರೋಧವಾದ ಬೆನ್ನಲ್ಲೇ ಈ ಕುರಿತು ಮಾತನಾಡಿದ ಚಿಂಚುರಾಣಿ, ಒಂದು ಘಟಕವು ಬೇರೆ ರಾಜ್ಯದಲ್ಲಿ ತನ್ನ ಮಳಿಗೆಗಳನ್ನು ಸ್ಥಾಪಿಸಲು ಅಧಿಕಾರಿಗಳಿಂದ ಅಗತ್ಯ ಅನುಮತಿಗಳನ್ನು ಪಡೆಯುವುದು ಅತ್ಯಗತ್ಯ ಎಂದು ಹೇಳಿದರು.
ಮಲಪ್ಪುರಂ ಜಿಲ್ಲೆಯ ಮಂಚೇರಿ ಮತ್ತು ತಿರೂರ್, ಎರ್ನಾಕುಲಂ ಜಿಲ್ಲೆಯ ಕೊಚ್ಚಿ ಮತ್ತು ಪತ್ತನಂತಿಟ್ಟ ಜಿಲ್ಲೆಯ ಪಂದಳಂನಲ್ಲಿ ನಂದಿನಿ ಈಗಾಗಲೇ ಮಳಿಗೆಗಳನ್ನು ಸ್ಥಾಪಿಸಿದ್ದು, ಇದು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಹೇಳಿದರು.ಇದನ್ನೂ ಓದಿ:ಗಾಢ ನಿದ್ರೆಯಲ್ಲಿದ್ದ ಪೋಷಕರು, 8ನೇ ಮಹಡಿಯಿಂದ ಬಿದ್ದು ಮಗು ಸಾವುಮಿಲ್ಮಾ ದೇಶದಲ್ಲೇ ಅತ್ಯುತ್ತಮ ಹಾಲನ್ನು ನೀಡುತ್ತದೆ. ನಂದಿನಿ ಚೆನ್ನಾಗಿಲ್ಲ ಆದ್ದರಿಂದ ಅದರ ಬಗ್ಗೆ ಮಾತನಾಡದಿರುವುದು ಉತ್ತಮ. ಈ ರಾಜ್ಯದ ಯಾವುದೇ ಜನರು ನಂದಿನಿಯನ್ನು ಖರೀದಿಸಬಾರದು, ನಂದಿನಿ ವಿರುದ್ಧದ ಹೋರಾಟಕ್ಕೆ ತಾನು ಸಿದ್ಧ ಎಂದು ಅವರು ಹೇಳಿದರು.
ಏತನ್ಮಧ್ಯೆ, ಮಿಲ್ಮಾ ಮಲಬಾರ್ ಪ್ರದೇಶ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಎಸ್.ಮಣಿ ಕರ್ನಾಟಕದ ಕೆಎಂಎಫ್​ ಪ್ರವೇಶದ ವಿರುದ್ಧ ಭಾರತೀಯ ರಾಷ್ಟ್ರೀಯ ಸಹಕಾರಿ ಡೈರಿ ಫೆಡರೇಶನ್‌ನ ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + seven =
Remember me
