ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮೇಲಿನ ಅಭಿಮಾನವೇ ಬಿಜೆಪಿಗೆ ಪ್ಲಸ್ ಪಾಯಿಂಟ್. ಹಾಲಿ ಸಂಸದರ ಬಗ್ಗೆ ಅಸಮಾಧಾನ ಇದ್ದರೂ ಬಿಜೆಪಿ ಓಟಕ್ಕೆ ತಡೆಯಾಗುವ ಲಕ್ಷಣಗಳಿಲ್ಲ. ಕಾಂಗ್ರೆಸ್​ಗೆ ಸಮರ್ಥ ಅಭ್ಯರ್ಥಿ ಕೊರತೆ ಇದೆಯಾದರೂ ಅದನ್ನು ನಿಭಾಯಿಸಿ ಮುನ್ನುಗ್ಗುವ ಸೂಚನೆ ನೀಡಿದ್ದು, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿದೆ.
| ಗೋಪಾಲಕೃಷ್ಣ ಪಾದೂರು, ಉಡುಪಿ
ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಉಡುಪಿ- ಚಿಕ್ಕಮಗಳೂರು ಕ್ಷೇತ್ರವನ್ನು ವಶಕ್ಕೆ ಪಡೆಯಲು ಕಾಂಗ್ರೆಸ್ ತಂತ್ರ ಹೆಣೆಯುತ್ತಿದೆ. ಹಾಲಿ ಸಂಸದೆ ಶೋಭಾ ಕರಂದ್ಲಾಜೆ, ಸಾರ್ವಜನಿಕರು- ಕಾರ್ಯಕರ್ತರೊಂದಿಗೆ ಅಂತರ ಕಾಯ್ದುಕೊಂಡಿದ್ದು, ಕ್ಷೇತ್ರ ಪ್ರವಾಸವೂ ಕಡಿಮೆ. ಹೀಗಾಗಿ ಅಭ್ಯರ್ಥಿ ಬದಲಾವಣೆ ಕೂಗು ಪಕ್ಷದೊಳಗೆ ಕೇಳಿ ಬರುತ್ತಿದೆ. ಆದರೆ ಶೋಭಾ ಬಿಜೆಪಿಯ ಪ್ರಮುಖ ನಾಯಕಿಯಾಗಿರುವ ಕಾರಣ, ಹೈಕಮಾಂಡ್ ಅವರಿಗೇ ಮಣೆ ಹಾಕುವ ಸಾಧ್ಯತೆ ಹೆಚ್ಚು. ಕಳೆದ ಬಾರಿ ಗೋ ಬ್ಯಾಕ್ ಶೋಭಾ ಅಭಿಯಾನ ನಡೆದಿದ್ದರೂ, ಕೊನೆಯ ಕ್ಷಣದಲ್ಲಿ ಅವರಿಗೇ ಟಿಕೆಟ್ ಒಲಿದಿತ್ತು. ಮಾಜಿ ಸಚಿವ ಸಿ.ಟಿ.ರವಿ, ಉಡುಪಿಯ ಮಾಜಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ಶೆಟ್ಟಿ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. 2022ರಲ್ಲಿ
ಕಾಂಗ್ರೆಸ್​ನಿಂದ ಬಿಜೆಪಿಗೆ ಜಿಗಿದ ಪ್ರಮೋದ್ ಮಧ್ವರಾಜ್ ಟಿಕೆಟ್​ಗಾಗಿ ಲಾಬಿ ನಡೆಸುತ್ತಿದ್ದಾರೆ. 2004ರಲ್ಲಿ ಅವರ ತಾಯಿ ಮನೋರಮಾ ಮಧ್ವರಾಜ್ ಬಿಜೆಪಿಯಿಂದ ಸ್ಪರ್ಧಿಸಿ ಸಂಸದೆಯಾಗಿದ್ದರು. ಕಾಂಗ್ರೆಸ್​ನಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿದೆ. ಬಿಜೆಪಿಯಲ್ಲಿದ್ದ ಅವರನ್ನು ಹಿಂದಿನ ಸರ್ಕಾರ ಆಯೋಗದ ಅಧ್ಯಕ್ಷರನ್ನಾಗಿಸಿತ್ತು. ನಂತರ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಉನ್ನತ ನಾಯಕರೊಂದಿಗೆ ಅವರಿಗೆ ಇರುವ ಆತ್ಮೀಯತೆಯಿಂದ ಅಧಿಕಾರ ಅವಧಿ ವಿಸ್ತರಣೆಗೊಂಡಿತ್ತು. ಉಳಿದಂತೆ ಎಐಸಿಸಿ ಕಾರ್ಯದರ್ಶಿ ಸಂದೀಪ್, ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಡಿ.ಆರ್. ರಾಜು, ಅನಿವಾಸಿ ಭಾರತೀಯ ಘಟಕದ ಅಧ್ಯಕ್ಷೆ ಡಾ. ಆರತಿ ಕೃಷ್ಣ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಸ್ಪರ್ಧಿಸುವ ಆಸಕ್ತಿ ತಳೆದಿದ್ದಾರೆ.
ಮತ ಲೆಕ್ಕಾಚಾರ:2014ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶೋಭಾ ಕರಂದ್ಲಾಜೆ 5,81,168 (ಶೇ.56.2) ಮತ ಪಡೆದು ಕಾಂಗ್ರೆಸ್​ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು 1,81,643 ಮತಗಳ ಅಂತರದಿಂದ ಸೋಲಿಸಿದ್ದರು.
ಕ್ಷೇತ್ರಗಳು ಅದಲು-ಬದಲು:2009ರಲ್ಲಿ ಕ್ಷೇತ್ರ ವಿಂಗಡಣೆಯಾಗಿ ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದ ಸುರತ್ಕಲ್, ಮೂಡುಬಿದಿರೆ, ಬಂಟ್ವಾಳ ವಿಧಾನಸಭಾ ಕ್ಷೇತ್ರಗಳು ದ.ಕ.ಲೋಕಸಭಾ ಕ್ಷೇತ್ರಕ್ಕೆ ಹಾಗೂ ಬೈಂದೂರು ಶಿವಮೊಗ್ಗಕ್ಕೆ ಸೇರ್ಪಡೆಯಾಗಿತ್ತು. ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ತರೀಕೆರೆ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ರಚನೆಯಾಯಿತು. ಈ ಚುನಾವಣೆಯಲ್ಲಿ ಮಂಗಳೂರು ಸಂಸದರಾಗಿದ್ದ ಡಿ.ವಿ.ಸದಾನಂದಗೌಡ, ಉಡುಪಿಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್​ನ ಜಯಪ್ರಕಾಶ್ ಹೆಗ್ಡೆ ವಿರುದ್ಧ 27,018 ಮತಗಳ ಅಂತರದಿಂದ ಗೆದ್ದಿದ್ದರು. ಸಿಎಂ ಆಗಲು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಮಾರ್ಚ್ 2012ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ನ ಜಯಪ್ರಕಾಶ್ ಹೆಗ್ಡೆ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ 45 ಸಾವಿರ ಮತಗಳ ಅಂತರದಿಂದ ಜಯ ಗಳಿಸಿದ್ದರು. ಜೆಡಿಎಸ್​ನ ಬೋಜೇಗೌಡ 70 ಸಾವಿರ ಮತ ಪಡೆದಿದ್ದರು.
ನರೇಂದ್ರ ಮೋದಿ ಪ್ರಭಾವಕ್ಕೆ ಕೈ ಕ್ಷೀಣ:2023ರ ವಿಧಾನಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಭರವಸೆಯ ಹೊರತಾಗಿಯೂ, ಉಡುಪಿಯ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ, 91,938 ಮತಗಳ ಮುನ್ನಡೆ ಸಾಧಿಸಿತ್ತು. ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ 18,980 ಮತಗಳ ಮುನ್ನಡೆಯಲ್ಲಿದೆ. ಹೀಗಾಗಿ ಲೋಕಸಭಾ ವ್ಯಾಪ್ತಿಯಲ್ಲಿ ಮೋದಿ ಪ್ರಭಾವ ವ್ಯಾಪಕವಾಗಿದೆ. ಗೆಲುವಿನ ಅಂತರ ಅಭ್ಯರ್ಥಿ ಯಾರು ಎಂಬುದನ್ನು ಅವಲಂಬಿಸಿದೆ.
ಬೇಸರದ ನಡುವೆಯೂ ಅನುದಾನದ ಹರಿವು:ಶೋಭಾ ಕರಂದ್ಲಾಜೆ ಕೇಂದ್ರದಲ್ಲಿ ಕೃಷಿ ಖಾತೆ ರಾಜ್ಯ ಸಚಿವೆಯಾಗಿ ಅವಳಿ ಜಿಲ್ಲೆಯಲ್ಲಿ ಗುರುತಿಸಬಹುದಾದ ಪ್ರಮುಖ ಯೋಜನೆ ಜಾರಿಗೊಳಿಸಿಲ್ಲ ಎಂಬ ಬೇಸರ ಸಾರ್ವಜನಿಕ ವಲಯ ದಲ್ಲಿದೆ. ಆದರೂ ಕಳೆದ 5 ವರ್ಷಗಳಲ್ಲಿ ಕೇಂದ್ರದಿಂದ ಹೆದ್ದಾರಿ ಯೋಜನೆ ಮತ್ತು ಜಲಜೀವನ್ ಮಿಷನ್​ನಡಿ ಗರಿಷ್ಠ ಅನುದಾನ ತಂದಿದ್ದಾರೆ. ಉಡುಪಿಗೆ ಕೇಂದ್ರೀಯ ರಸ್ತೆ ನಿಧಿಯಲ್ಲಿ 595 ಕೋಟಿ ರೂ., ರಾ.ಹೆ 169ಎ ಮಲ್ಪೆಯಿಂದ ಹೆಬ್ರಿವರೆಗೆ 453 ಕೋಟಿ ರೂ., ಮಾಳ ಗೇಟ್-ಕಾರ್ಕಳ ರಸ್ತೆ ವಿಸ್ತರಣೆಗೆ 177.84 ಕೋಟಿ ರೂ., ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 320 ಕೋಟಿ ರೂ., ಜಲಜೀವನ ಮಿಷನ್​ನಲ್ಲಿ 1215 ಕೋಟಿ ರೂ. ಅನುದಾನ ಲಭಿಸಿದೆ. ಚಿಕ್ಕಮಗಳೂರಿಗೆ ಕೇಂದ್ರ ರಸ್ತೆ ನಿಧಿಯಲ್ಲಿ 46 ಕೋಟಿ ರೂ., ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 213 ಕೋಟಿ ರೂ., ಜಲಜೀವನ ಮಿಷನ್ ಹಾಗೂ ಗ್ರಾಮೀಣ ಕುಡಿಯುವ ನೀರು ಯೋಜನೆಯಲ್ಲಿ 110 ಕೋಟಿ ರೂ., ಕೇಂದ್ರೀಯ ವಿದ್ಯಾಲಯಕ್ಕೆ 28 ಕೋಟಿ ರೂ., ಚಿಕ್ಕಮಗಳೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ 195 ಕೋಟಿ ರೂ. ಸೇರಿ ವಿವಿಧ ಯೋಜನೆಗಳಿಗೆ ಅನುದಾನ ಲಭ್ಯವಾಗಿದೆ.
ಸದನದಲ್ಲಿ ಹಾಜರಾತಿ:ಶೋಭಾ ಕರಂದ್ಲಾಜೆ ಅಧಿವೇಶನದಲ್ಲಿ ಶೇ.89 ಹಾಜರಾತಿ ಹೊಂದಿದ್ದಾರೆ. ಅಡಕೆ-ಕಾಫಿ ಬೆಳೆಗಾರರ ಸಮಸ್ಯೆ ಸೇರಿ 20 ಚರ್ಚೆಗಳಲ್ಲಿ ಭಾಗವಹಿಸಿದ್ದಾರೆ. 131 ಪ್ರಶ್ನೆ ಕೇಳಿದ್ದಾರೆ.
ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
