ಬೆಂಗಳೂರು:ರಾಜ್ಯದಲ್ಲಿ ಮಂಗನ ಕಾಯಿಲೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್-ಕೆಎಫ್‌ಡಿ) ನಿಯಂತ್ರಣ ಸಂಬಂಧ ಶಂಕಿತ ಪ್ರಕರಣಗಳನ್ನು ಗುರುತಿಸುವುದರ ಜತೆಗೆ ಅಗತ್ಯ ಚಿಕಿತ್ಸೆಗೆ ಕ್ರಮಕೈಗೊಳ್ಳುವಂತೆ ಕೆಎಫ್‌ಡಿ ಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚಿಸಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆ ಇಲಾಖೆ ಆಯುಕ್ತ ಡಿ. ರಂದೀಪ್, ಶಿವಮೊಗ್ಗ, ಉತ್ತರ ಕನ್ನಡ ಸೇರಿ ಕೆಲವೆಡೆ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿರುವುದರಿಂದ ರೋಗದ ನಿರ್ವಹಣೆಗೆ ಅಗತ್ಯ ಕ್ರಮವಹಿಸುವಂತೆ ತಿಳಿಸಿದ್ದಾರೆ.
ಈ ಕಾಯಿಲೆಗೆ ನಿರ್ದಿಷ್ಟ ಚಿಕಿತ್ಸೆಯಿಲ್ಲ. ಲಕ್ಷಣವನ್ನು ಆಧರಿಸಿ ಚಿಕಿತ್ಸೆ ಒದಗಿಸಬೇಕಾಗುತ್ತದೆ. ಸೋಂಕಿತ ಮಂಗನ ರಕ್ತ ಹೀರುವ ಉಣ್ಣೆಗಳು ವೈರಾಣುವನ್ನು ಮನುಷ್ಯನಿಗೆ ಹರಡುತ್ತವೆ. ಈ ವೈರಾಣು ಕಾಣಿಸಿಕೊಂಡವರಿಗೆ ಹಠಾತ್ ಜ್ವರ ಹಾಗೂ ತೀವ್ರ ಮೈಕೈ ನೋವು ಕಾಣಿಸಿಕೊಳ್ಳುತ್ತದೆ. ಕೆಎಫ್‌ಡಿ ಬಾಧಿತ ಜಿಲ್ಲೆಗಳಲ್ಲಿ ಎಲ್ಲ ಜ್ವರ ಪ್ರಕರಣಗಳೂ ಶಂಕಿತ ಕೆಎಫ್‌ಡಿ ಪ್ರಕರಣಗಳೇ ಆಗಿರುತ್ತವೆ. ಆರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ, ಚಿಕಿತ್ಸೆ ನೀಡಿದಲ್ಲಿ ರೋಗದ ನಿರ್ವಹಣೆ ಸುಲಭಸಾಧ್ಯ ಎಂದು ಹೇಳಿದ್ದಾರೆ.
ಮಂಗಗಳ ಅಸಹಜ ಸಾವು ವರದಿಯಾದಲ್ಲಿ ಸೋಂಕು ಶಂಕಿತರ ಮೇಲೆ ಕಣ್ಗಾವಲು ಪ್ರಕ್ರಿಯೆ ಪ್ರಾರಂಭಿಸಿ, ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಬೇಕು. ಮಂಗಗಳಿಗೆ ಅಥವಾ ಮನುಷ್ಯರಿಗೆ ಸೋಂಕು ದೃಢಪಟ್ಟಲ್ಲಿ 5 ಕಿ.ಮೀ. ಸುತ್ತಮುತ್ತಲಿನ ಪ್ರದೇಶದ ಮೇಲೆ ಕಣ್ಗಾವಲು ವಹಿಸಬೇಕು. ಸೋಂಕು ಶಂಕಿತರ ಮಾದರಿ ಸಂಗ್ರಹ, ಪರೀಕ್ಷೆ ಹಾಗೂ ಚಿಕಿತ್ಸೆಗೆ ಆದ್ಯತೆ ನೀಡಬೇಕು. ಸೋಂಕಿತರು ಕಡ್ಡಾಯವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಬೇಕು. ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ದಾಸ್ತಾನನ್ನು ಖಚಿತಪಡಿಸಿಕೊಳ್ಳುವಂತೆ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − sixteen =
Remember me
