ಬೆಂಗಳೂರು: ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್​ 2 ಬಿಡುಗಡೆ ದಿನಾಂಕ ಹೊರಬಿದ್ದಿದೆ. ಜುಲೈ 16ರಂದು ಸಿನಿಮಾ ಪಂಚ ಭಾಷೆಗಳಲ್ಲಿ ತೆರೆ ಮೇಲೆ ಬರಲಿದೆ ಎಂದು ಸಿನಿಮಾ ತಿಳಿಸಿದೆ.
ಕೆಜಿಎಫ್​ ಸಿನಿಮಾ ಕರ್ನಾಟಕ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಧೂಳೆಬ್ಬಿಸಿತ್ತು. ಕನ್ನಡ ಚಿತ್ರರಂಗವನ್ನು ಬೇರೆಯದ್ದೇ ಸ್ಥಾನಕ್ಕೆ ಕೊಂಡೊಯ್ದಿತ್ತು. ಇದೀಗ ಕೆಜಿಎಫ್​ 2 ಸಿನಿಮಾ ಮೇಲೆ ಅದಕ್ಕಿಂತ ಹೆಚ್ಚಿನ ನಿರೀಕ್ಷೆಯನ್ನು ಕನ್ನಡಿಗರು ಇಟ್ಟುಕೊಂಡಿದ್ದಾರೆ. ಅದಕ್ಕೆ ಸರಿಯಾಗಿ ಕೆಜಿಎಫ್​ 2 ಸಿನಿಮಾದ ಟೀಸರ್​ ಅತಿ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ಹೊಸ ದಾಖಲೆಯನ್ನೇ ಸೃಷ್ಟಿಸಿ ಬಿಟ್ಟಿದೆ. ಇದೀಗ ಸಿನಿಮಾ ಬಿಡುಗಡೆ ದಿನಾಂಕವೂ ಹೊರಬಿದ್ದಿದು, ಜುಲೈ 16ಕ್ಕಾಗಿ ಕನ್ನಡ ಚಿತ್ರ ಪ್ರೇಮಿಗಳು ತುದಿಗಾಲಲ್ಲಿ ನಿಂತು ಕಾಯಲಾರಂಭಿಸಿದ್ದಾರೆ. ಕನ್ನಡ, ಮಲಯಾಳಂ, ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಸಿನಿಮಾ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ, ಅ. 24ರಂದು ಕೆಜಿಎಫ್​ ಚಾಪ್ಟರ್ 2 ಸಿನಿಮಾ ಗ್ರ್ಯಾಂಡ್​ ರಿಲೀಸ್​ ಆಗಬೇಕಿತ್ತು. ಆದರೆ, ಕರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​ ಒತ್ತಟಿಗಿರಲಿ, ಶೂಟಿಂಗ್​ ಮಾಡಿಕೊಳ್ಳುವುದಕ್ಕೇ ಸಮಯ ಕೂಡಿ ಬಂದಿರಲಿಲ್ಲ.
ಪ್ರಶಾಂತ್ ನೀಲ್​ ನಿರ್ದೇಶನದ ಕೆಜಿಎಫ್​ ಚಿತ್ರವನ್ನು ಹೊಂಬಾಳೆ ಫಿಲಂಸ್​ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
‘ಸೂರ್ಯವಂಶಿ’ ದಾಖಲೆ ಮುರಿದ ‘ಕೆಜಿಎಫ್​ 2’

ಜನವರಿ 08ಕ್ಕೆ ‘ಕೆಜಿಎಫ್​ 2’ ಚಿತ್ರದ ಮೊದಲ ಟೀಸರ್​ …

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 7 =
Remember me
