ಕೋಲಾರ:ಜಿಲ್ಲಾಡಳಿತ ಕಚೇರಿ ಮುಂಭಾಗ ಕೆಜಿಎಫ್ ಶಾಸಕಿ ರೂಪಾ ಶಶಿಧರ ಅವರು ಏಕಾಂಗಿಯಾಗಿ ಹೋರಾಟ ನಡೆಸಿದರು.
ಶನಿವಾರ ಬೆಳಗ್ಗೆ ಡಿಸಿ ಕಚೇರಿ ಮುಂದೆ ಬ್ಯಾನರ್​​ ಹಿಡಿದು ನಿಂತ ಶಾಸಕಿ, ಜಿಲ್ಲಾಧಿಕಾರಿ ಮತ್ತು ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.ಇದನ್ನೂ ಓದಿರಿಪಕ್ಷಾಂತರ ಗುಮ್ಮ ಮತ್ತೆ ಬಂತು! ಜೆಡಿಎಸ್​ ತೊರೆದು ‘ಕೈ’ ಹಿಡಿಯಲು ಕ್ಷಣಗಣನೆ
ಅಷ್ಟಕ್ಕೂ ಶಾಸಕಿ ರೂಪಾ ಅವರು ಧರಣಿ ನಡೆಸಿದ್ದು ಯಾಕೆ ಗೊತ್ತಾ? ತಮ್ಮ ಕ್ಷೇತ್ರದ ರಸ್ತೆ ಕಾಮಗಾರಿ ವಿಷಯಕ್ಕೆ. ಕೆಜಿಎಫ್​ನ ಅಶೋಕ ರಸ್ತೆ ಅಗಲೀಕರಣ ಕಾಮಗಾರಿಗೆ ಅನುಮೋದನೆ ಸಿಕ್ಕರೂ ಕಾಮಗಾರಿ ಆರಂಭ ಆಗಿಲ್ಲ. ಇದರಿಂದ ಬೇಸತ್ತ ಶಾಸಕಿ ಪ್ರತಿಭಟನೆ ನಡೆಸಿದರು.
‘ರಸ್ತೆ ಅಗಲೀಕರಣಕ್ಕೆ ಹಲವಾರು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಯಾವುದೇ ಕ್ರಮಕೈಗೊಂಡಿಲ್ಲ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಜನತೆ ರಸ್ತೆ ಅಗಲೀಕರಣಕ್ಕೆ ಯಾವುದೇ ವಿರೋಧ ವ್ಯಕ್ತಪಡಿಸಿಲ್ಲ. ರಸ್ತೆ ಅಭಿವೃದ್ಧಿ ಆಗದ ಪರಿಣಾಮ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ರಸ್ತೆ ಕಾಮಗಾರಿ ನಡೆಸುವವರೆಗೂ ಮೌನ ಪ್ರತಿಭಟನೆ ಮುಂದುವರಿಯಲಿದೆ’ ಎಂದು ಶಾಸಕಿ ಎಚ್ಚರಿಕೆ ನೀಡಿದರು. ಅಲ್ಲದೆ ಸೋಮವಾರ ಶುರುವಾಗುವ ವಿಧಾನಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದರು.
ಮಧ್ಯಾಹ್ನ 1 ಗಂಟೆಯಾದರೂ ಏಕಾಂಗಿಯಾಗಿ ಶಾಸಕಿ ಹೋರಾಟ ನಡೆಸುತ್ತಿದ್ದರು. ಪೊಲೀಸರು ಮನವೊಲಿಸಿದರೂ ಪ್ರತಿಭಟನೆ ಹಿಂಪಡೆದಿರಲಿಲ್ಲ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

ಕಟ್ಟಿದ್ದು ಕೇವಲ 12 ರೂಪಾಯಿ, ಬಂದದ್ದು ಬರೋಬ್ಬರಿ 2 ಲಕ್ಷ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
