ಕೆಜಿಎಫ್(ಕೋಲಾರ):ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಗೆ ಕೆಎಸ್​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಚಾಲನೆ ನೀಡಿದರು. ಈ ವೇಳೆ ಅವರು ಅವರು ಬಸ್ ಚಲಾಯಿಸಿ ಅಲ್ಲಿದ್ದವರ ಗಮನ ಸೆಳೆದರು.
ಬಸ್ ಚಲಾಯಿಸಿ ಗಮನ ಸೆಳೆದ ಕೆಜಿಎಫ್ ಶಾಸಕಿ ರೂಪಕಲಾ#Bus#KSRTC#MLARoopakala#KGF#KGFMLA#Congress#freebusticketpic.twitter.com/iCpOG4BjJZ
— Vijayavani (@VVani4U)June 11, 2023fe
ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಶಾಸಕಿ ರೂಪಕಲಾ ಚಾಲನೆ ನೀಡುತ್ತಿದ್ದಂತೆ, ಅಲ್ಲಿದ್ದ ಕಾರ್ಯಕರ್ತರು ಬಸ್ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ. ಕೊನೆಗೆ ಎಲ್ಲರ ಒತ್ತಾಯಕ್ಕೆ ಮಣಿದ ಶಾಸಕಿ ಬಸ್ ಚಲಾಯಿಸಲು ಮುಂದಾದರು. ಅವರಿಗೆ ಬಸ್ಸಿನ ಚಾಲಕ ಮಾರ್ಗದರ್ಶನ ಮಾಡಿದರು.
ಬೆಂಬಲಿಗರ ಒತ್ತಾಯಕ್ಕೆ ಮಣಿದ ಶಾಸಕಿ ಬಸ್ಸು ಚಲಾಯಿಸಲು ಮುಂದಾಗಿದ್ದಾರೆ. ಈ ವೇಳೆ ಆರಂಭದಲ್ಲಿ ಗೇರ್ ಸರಿಯಾಗಿ ಬೀಳದೆ ಬಸ್ಸು ಹಿಮ್ಮುಖವಾಗಿ ಚಲಿಸಿದೆ. ಇದರಿಂದ ಹಿಂಭಾಗದಲ್ಲಿ ಇನ್ನೊಂದು ಬಸ್ಸಿಗೆ ಡಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿಕೊಂಡಿದ್ದಾರೆ. ಕೊನೆಗೆ ಶಾಸಕಿ ರೂಪಕಲಾ ಬಸ್​ನಲ್ಲಿ ಕುಳಿತು ಸ್ವಲ್ಪ ದೂರ ಪ್ರಯಾಣಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
