ಬೆಂಗಳೂರು:ಅಕ್ಕಿ ವಿಚಾರ ಕುರಿತು ನಾಳೆ ನವದೆಹಲಿಗೆ(New Delhi)ಭೇಟಿ ನೀಡಿ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ. ಎಚ್. ಮುನಿಯಪ್ಪ(KH Muniyappa)ಹೇಳಿದ್ದಾರೆ.
ಇದನ್ನೂ ಓದಿ:VIDEO| ಹುಲಿಯನ್ನು ಧೈರ್ಯವಾಗಿ ಹಿಮ್ಮೆಟ್ಟಿಸಿದ ಹಸುಗಳ ಹಿಂಡು
ಈ ಬಗ್ಗೆ ಮಾತನಾಡಿದ ಸಚಿವ ಕೆ. ಎಚ್. ಮುನಿಯಪ್ಪ, ಒಡಿಶಾ, ಚತ್ತೀಸಗಢ, ಆಂಧ್ರ, ತೆಲಂಗಾಣ ಸೇರಿದಂತೆ ನೆರೆ ರಾಜ್ಯಗಳಿಂದ ಅಕ್ಕಿ ಖರೀದಿಯ ಪ್ರಯತ್ನ ನಡೆಯುತ್ತಿದೆ. ಗ್ಯಾರಂಟಿ ಪ್ರಕಾರ ನಾವು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಈ ಹಿಂದೆ ಮಾತು ಕೊಟ್ಟಿದ್ದೇವೆ. ಎಫ್​ಸಿಐ ಅಕ್ಕಿ ಕೊಡುತ್ತೇವೆ ಎಂದು ಜೂ.12ಕ್ಕೆ ಹೇಳಿದ್ದರು. ಆದ್ರೆ ಜೂ.13 ಕ್ಕೆ ಕೊಡಲ್ಲ ಅಂತ ಹೇಳಿದ್ದಾರೆ. ಈ ಹಿನ್ನೆಲೆ ಸಿಎಂ ನಿರ್ದೇಶನದ ಮೇರೆಗೆ ನಾಳೆ ನಾನು ದೆಹಲಿಗೆ ತೆರಳುತ್ತೇನೆ ಎಂದು ಹೇಳಿದರು.
ಕೇಂದ್ರ ಆಹಾರ ಸರಬರಾಜು ಸಚಿವರನ್ನು ಭೇಟಿಯಾಗುವ ಮೂಲಕ ಅಕ್ಕಿ ಖರೀದಿಯ ಪ್ರಯತ್ನ ಮಾಡುತ್ತೇವೆ. ಎಫ್​ಸಿಐ ಬಳಿ 7 ಲಕ್ಷ ಟನ್ ಅಕ್ಕಿ ದಾಸ್ತಾನು ಇದೆ. ಅದರಲ್ಲಿ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನಮ್ಮ ರಾಜ್ಯಕ್ಕೆ ಅಗತ್ಯವಿದೆ. ಕೇಂದ್ರ ಸರ್ಕಾರದ ಜೊತೆ ಅಕ್ಕಿ ಖರೀದಿಯ ಪ್ರಯತ್ನದ ಜೊತೆಗೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೂ ಪ್ರಯತ್ನವನ್ನು ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಹು-ಧಾ ಮಹಾನಗರ ಪಾಲಿಕೆ ಚುನಾವಣೆ | ನೂತನ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆ
ಈ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಬಹುದು. ಕೇಂದ್ರೀಯ ಬಂಡಾರ, ನಾಫೆಡ್, ಎನ್​ಸಿಸಿಎಫ್​ನಿಂದ ಅಕ್ಕಿ ಖರೀದಿ ಮಾಡಬೇಕಾಗಿದೆ. ಕಾನೂನು ಮತ್ತು ಟೆಂಡರ್ ಪ್ರಕ್ರಿಯೆಗಳಿಂದ ಇದು ಸ್ವಲ್ಪ ವಿಳಂಬವಾಗಲಿದೆ. ಹಿಂದೆ ಇದೇ ಸಂಸ್ಥೆಗಳು ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುತ್ತಿದ್ದವು, ಈ ಸಂಸ್ಥೆಗಳಿಗೆ ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಹೇಳಲಾಗಿದೆ. ಕೇಂದ್ರೀಯ ಸಂಸ್ಥೆಗಳಿಂದ ಅಕ್ಕಿ ಖರೀದಿ ಮಾಡುತ್ತೇವೆ. ಇದರಿಂದ ನಮಗೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ತಡವಾದರೂ ಅಕ್ಕಿಯನ್ನು ಖಂಡಿತ ಕೊಡುತ್ತೇವೆ ಎಂದು ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − eight =
Remember me
