
ಬೆಂಗಳೂರು:ಕೆಐಎಡಿಬಿ ನಿವೇಶನಗಳನ್ನು ಪಡೆವರ ಪಟ್ಟಿಯನ್ನು ತಲಾಷ್ ಮಾಡುತ್ತಿರುವ ಅಧಿಕಾರಿಗಳ ತಂಡ, ಕಳೆದ ಆರೇಳು ವರ್ಷಗಳಲ್ಲಿ ಏನೇನು ಆಗಿದೆ ಎನ್ನುವ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳುತ್ತಿದೆ.ತಾವು ಸಚಿವರಾದ ಮೇಲೆ ಕೆಐಎಡಿಬಿ ಕರ್ಮಕಾಂಡ ನಡೆದಿದೆ ಎಂದು ಬಿಜೆಪಿ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಅವಧಿಯಲ್ಲಿ ಹಂಚಿಕೆಯಾಗಿರುವ ನಿವೇಶನಗಳು ಮತ್ತು ಅದರ ಮಾಹಿತಿಯನ್ನ ಪೂರ್ಣ ಪ್ರಮಾಣದಲ್ಲಿ ನೀಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ತಾಕೀತು ಮಾಡಿದ್ದಾರೆ.ಪ್ರಮುಖವಾಗಿ ಬೆಂಗಳೂರು ಮತ್ತು ಪ್ರಮುಖ ಮಹಾನಗರ ವ್ಯಾಪ್ತಿಯಲ್ಲಿ ಹಂಚಿಕೆಯಾಗಿರುವ ನಿವೇಶನಗಳಲ್ಲಿ ಎಷ್ಟು ಜನರು ಶಾಸಕರು, ಆಗಿನ ಸಚಿವರು ಇದ್ದಾರೆ ಎನ್ನುವ ಮಾಹಿತಿಯನ್ನು ಪಟ್ಟಿ ಮಾಡುವಂತೆಯೂ ಸೂಚಿಸಲಾಗಿದೆ.2008ರಲ್ಲಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದ ಮೇಲೆ ಆಗಿರುವ ಪ್ರಮುಖ ಪ್ರಕರಣಗಳನ್ನು ತಮ್ಮ ಗಮನಕ್ಕೆ ತರಬೇಕು. ವಿಶೇಷವಾಗಿ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಮಾಹಿತಿ ಇದ್ದರೂ ಅದನ್ನು ಪಟ್ಟಿ ಮಾಡಿ ತಿಳಿಸುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಮಾಹಿತಿಗಳು ತಮ್ಮ ಬಳಿ ಲಭ್ಯವಿದ್ದರೆ, ಅಗತ್ಯ ಸಂದರ್ಭದಲ್ಲಿ ಅವುಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳನ್ನು ಹಣಿಯಲು ಸಾಧ್ಯವಾಗುತ್ತದೆ ಎನ್ನುವುದು ಒಂದು ಉದ್ದೇಶವಾದರೆ, ತಮ್ಮ ಮೇಲೆ ವಿನಾ ಕಾರಣ ಆರೋಪ ಮಾಡುತ್ತಿರುವವರು ಹಿಂದೆ ಹೇಗೆ ನಡೆದುಕೊಂಡಿದ್ದಾರೆ ನೋಡಿ ಎಂದು ತೋರಿಸಲು ಅಗತ್ಯವಾಗಿದೆ ಎನ್ನುವುದು ಸಚಿವರ ಉದ್ದೇಶವಾಗಿದೆ ಎನ್ನಲಾಗಿದೆ.ಲಭ್ಯವಿರುವ ಮಾಹಿತಿ ಪ್ರಕಾರ ಹಂಚಿಕೆಯಾಗಿರುವ ನಿವೇಶನಗಳಲ್ಲಿ ಎಲ್ಲಾ ಪಕ್ಷಗಳ ನಾಯಕರು ಇದ್ದಾರೆ. ಆದರೆ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚು ಹಂಚಿಕೆಯಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 17 =
Remember me
