ಬೆಂಗಳೂರು:ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ರಾಜ್ಯ ಸರ್ಕಾರ ನೀರು ಬಿಟ್ಟಿರುವುದನ್ನು ಖಂಡಿಸಿ ರೈತರು ಹಾಗೂ ವಿವಿಧ ಸಂಘಗಳು ನಡೆಸುತ್ತಿರುವ ಹೋರಾಟಕ್ಕೆ ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್​ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ನಟ ಕಿಚ್ಚ ಸುದೀಪ್ ನಮ್ಮ ರಾಜ್ಯದ ಬರ ಪರಿಸ್ಥಿತಿಯನ್ನು ಅರ್ಥ ಮಾಡಿಸಲು ಎಲ್ಲಾ ಪಕ್ಷದ ನಾಯಕರು ಒಟ್ಟಾಗಬೇಕು ಎಂದು ಮನವಿ ಮಾಡಿದ್ದಾರೆ.
ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲಾ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರುಮಳೆಯು ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ.
🙏🏼pic.twitter.com/KBr7GOrzco
ಇದನ್ನು ಓದಿ:ಇದೇನು ಕನ್ನಡಿಗರ ಸರ್ಕಾರವೋ, ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ: ಮಾಜಿ ಸಿಎಂ ಎಚ್​ಡಿಕೆ ವಾಗ್ದಾಳಿ
ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ-ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಿಬುನಲ್​ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮಾಡಿಕೊಡಬೇಕಿದೆ. ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಮಿಳುನಾಡಿನ ಮುಖ್ಯಮಂತ್ರಿಗಳ ಜೊತೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದೆಂದು ಹಿರಿಯರು ಹೇಳಿದ್ದನ್ನು ನಾನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ-ಜಲ ಹಾಹಾಕಾರಕ್ಕೆ ಪರಿಹರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ.
ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿತಿಯನ್ನು ಅರ್ಥ ಮಾಡಿಸಲು ಎಲ್ಲಾ ಪಕ್ಷದ ನಾಯಕರು ಒಗ್ಗಾಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರುವೈ ಬೆಳೆಗೆ ನೀರು ಸಿಗಲಿ ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆಹರಿದು ಹೋರಾಟಕ್ಕೆ ಜಯ ಸಿಗಲಿ. ಇದರ ಜೊತೆಗೆ ಉತ್ತರ ಕರ್ನಾಟಕ ಕೃಷ್ಣಾ ನದಿ ಮಹಾದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿದು ಜನರ ಕಷ್ಟ ತೀರಲೆಂದು ಆಶಿಸುವುದಾಗಿ ನಟ ಸುದೀಪ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:7 + thirteen =
Remember me
