ಬೆಂಗಳೂರು:ಪೊಲೀಸರ ವಿರುದ್ಧವೇ ಕಿಡ್ನ್ಯಾಪ್ ಹಾಗೂ ಬ್ಲ್ಯಾಕ್​ಮೇಲ್ ದೂರು ನೀಡಲಾಗಿದ್ದು, ಕಮಿಷನರ್​ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಂತೆ ಆರೋಪಿಗಳಲ್ಲಿ ಒಬ್ಬನಾಗಿರುವ ಹೆಡ್​ಕಾನ್​ಸ್ಟೆಬಲ್ ಬಂಧನವಾಗಿದೆ. ಮತ್ತೊಂದೆಡೆ ಇನ್ನೊಬ್ಬ ಆರೋಪಿಯಾಗಿರುವ ಸಬ್​ ಇನ್​ಸ್ಪೆಕ್ಟರ್ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ.
ಇದನ್ನೂ ಓದಿ:ದೆಹಲಿಯಲ್ಲಿ ಭೂಕಂಪ!; ವರ್ಷಾರಂಭದಲ್ಲೇ ನಡುಗಿದ ಭೂಮಿ, ಆತಂಕದಲ್ಲಿ ರಾಜಧಾನಿಯ ಜನತೆ
ಹುಲಿ ಉಗುರು ಹಾಗೂ ಚರ್ಮವನ್ನು ಮಾರಾಟ ಮಾಡುತ್ತಿದ್ದವನನ್ನು ಶನಿವಾರ ಕರೆದೊಯ್ದಿದ್ದ ಪೊಲೀಸರು ನಂತರ ಆತನ ಕಡೆಯವರಿಗೆ ಕರೆ ಮಾಡಿ 40 ಲಕ್ಷ ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಾರತಹಳ್ಳಿ ಠಾಣೆ ಪಿಎಸ್​​ಐ ರಂಗೇಶ್ ಹಾಗೂ ಹೆಡ್​ ಕಾನ್​ಸ್ಟೆಬಲ್ ಹರೀಶ್ ವಿರುದ್ಧ ಬಾಗಲೂರು ಪೊಲೀಸ್​ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಇದನ್ನೂ ಓದಿ:ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!
ಆರೋಪಿಯನ್ನು ಕರೆದೊಯ್ದಿದ್ದಲ್ಲದೆ ಆತನ ತಲೆಗೆ ಗನ್​ ಇಟ್ಟು ಹಣ ಕೊಡುವಂತೆ ಆತನ ಕಡೆಯವರಿಗೆ ಕರೆ ಮಾಡಿಸಿದ್ದಾಗಿ ದೂರು ನೀಡಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್​ ಪ್ರತಾಪ್ ರೆಡ್ಡಿ, ಆರೋಪಿ ಪೊಲೀಸರನ್ನು ಬಂಧಿಸುವಂತೆ ಸೂಚನೆ ನೀಡಿದ್ದರು.
ಇದನ್ನೂ ಓದಿ:ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!
ಈ ಹಿನ್ನೆಲೆಯಲ್ಲಿ ನಿನ್ನೆ ಹೆಡ್​ ಕಾನ್​​ಸ್ಟೆಬಲ್ ಹರೀಶ್​ನನ್ನು ಬಾಗಲೂರು ಪೊಲೀಸರು ಬಂಧಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಪರಾರಿಯಾದ ಎಸ್​ಐ ರಂಗೇಶ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ತೀವ್ರ ಶೋಧ ನಡೆಯುತ್ತಿದೆ.
ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × four =
Remember me
