ಬೆಂಗಳೂರು: ರಾಜ್ಯ ಸರ್ಕಾರದ ಸ್ವಾಯತ್ತ ಸಂಸ್ಥೆ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಸಂಗ್ರಹಿಸುವ ಬೂತ್​ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಭಾನುವಾರ ಚಾಲನೆ ನೀಡಿದ್ದಾರೆ.
ಕಿದ್ವಾಯಿಗೆ ದಾಖಲಾಗುವ ಒಳರೋಗಿಗಳ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಕರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ರೋಗಿಗಳನ್ನು ಮಾತ್ರ ಮುಂದಿನ ಚಿಕಿತ್ಸೆಗೆ ಒಳಪಡಿಸ ಲಾಗುವುದು ಎಂದು ಸಂಸ್ಥೆಯ ನಿರ್ದೇಶಕ ಡಾ. ಸಿ. ರಾಮಚಂದ್ರ ತಿಳಿಸಿದರು.
ಕಿದ್ವಾಯಿಯಲ್ಲಿ ಕರೊನಾ ಪರೀಕ್ಷಾ ಪ್ರಯೋಗಾಲಯ ಸ್ಥಾಪಿಸುವುದಕ್ಕೆ ಐಸಿಎಂಆರ್​ನ ಡಾ. ಮಂಜುನಾಥ್ ಮೌಖಿಕ ಅನುಮತಿ ನೀಡಿದ್ದಾರೆ. ಈ ಪ್ರಯೋಗಾಲಯಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸಂಸ್ಥೆಗೆ ಸಲ್ಲಿಸಿದ್ದು, ಶೀಘ್ರ ದಲ್ಲೇ ಅನುಮೋದನೆ ದೊರೆಯುವ ನಿರೀಕ್ಷೆಯಿದೆ. ಇದಕ್ಕಾಗಿ ಬೆಕ್​ವ್ಯಾನ್ ಕೌಲ್ಟರ್ ಬಯೋಮೆಕ್- 4000 ಮತ್ತು ಕ್ವಾಂಟ್ ಸ್ಟುಡಿಯೋ 5 ಉಪಕರಣಗಳನ್ನು ಬಳಸಲಾಗುತ್ತಿದೆ. ಮೂರೂವರೆ ತಾಸಿನ ಅವಧಿಯೊಳಗೆ 380 ಸ್ಯಾಂಪಲ್​ಗಳ ಪರೀಕ್ಷೆ ನಡೆಸುವ ಸಾಮರ್ಥ್ಯ ಹೊಂದಿವೆ. ಶೀಘ್ರದಲ್ಲೇ ಹೆಚ್ಚಿನ ಸಾಮರ್ಥ್ಯದ ಉಪಕರಣವನ್ನು ಅಳವಡಿಸಲಾಗುವುದು ಎಂದು ಹೇಳಿದರು. ಸಂಸದ ತೇಜಸ್ವಿ ಸೂರ್ಯ ಮತ್ತಿತರರಿದ್ದರು.
https://www.vijayavani.net/politician-locks-people-in-haunted-house-for-breaking-quarantine-rules/
ಆದಾಯ ಇಲ್ಲದೆ ಜನ ಸಂಕಷ್ಟದಲ್ಲಿದ್ದಾರೆ, ಜೀವನ ವೆಚ್ಚ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳಿ- ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
