ದಾವಣಗೆರೆ:ಜನ್ಮಕೊಟ್ಟ ತಾಯಿ ಮತ್ತು ಒಡಹುಟ್ಟಿದ ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಇಬ್ಬರನ್ನೂ ಕೊಂದು ದುಷ್ಕರ್ಮಿ ಪರಾರಿಯಾಗಿರುವ ಘಟನೆ ಹರಿಹರ ತಾಲೂಕಿನ ಎಕ್ಕೆಗೊಂದಿ ಗ್ರಾಮದಲ್ಲಿ ಸಂಭವಿಸಿದೆ.
ಸರೋಜಮ್ಮ (60) ಮತ್ತು ಇವರ ಪುತ್ರಿ ಜ್ಯೋತಿ (34) ಮೃತ ದುರ್ದೈವಿಗಳು. ಸರೋಜಮ್ಮರ ಪುತ್ರ, ಹರಿಹರ ತಾಲೂಕಿನ ಪಾಳ್ಯ ಗ್ರಾಮದ ಭರಮಗೌಡ ಆರೋಪಿ.ಇದನ್ನೂ ಓದಿರಿಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು
ಹೊರಗೆ ಬಂದಿದ್ದ ಅಮ್ಮ-ಮಗಳು ಇಬ್ಬರೂ ಶುಕ್ರವಾರ ಮಧ್ಯಾಹ್ನ ಮನೆಯತ್ತ ನಡೆದುಕೊಂಡು ಹೋಗುತ್ತಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್​ ಸವಾರಿ ಮಾಡಿಕೊಂಡು ಬಂದ ಭರಮಗೌಡ, ಉದ್ದೇಶ ಪೂರ್ವಕವಾಗಿಯೇ ತನ್ನ ತಾಯಿ ಮತ್ತು ತಂಗಿ ಮೇಲೆ ಟ್ರ್ಯಾಕ್ಟರ್​ನಿಂದ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಟ್ರ್ಯಾಕ್ಟರ್​ ಡಿಕ್ಕಿಯಾದ ರಭಸಕ್ಕೆ ತೀವ್ರ ಗಾಯಗೊಂಡ ಅವರಿಬ್ಬರೂ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಬಳಿಕ ಘಟನೆ ನಡೆದ ಸ್ಥಳದಲ್ಲೇ ಟ್ರ್ಯಾಕ್ಟರ್​ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಕಂಡು ಸ್ಥಳೀಯರು ಬೆಚ್ಚಿಬಿದ್ದರು.
ಕೌಟುಂಬಿಕ ಕಲಹ ಹಿನ್ನೆಯಲ್ಲಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಮಲೇಬೆನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ಕೆಳಗೆ ಬಿದ್ದ ಶಾಸಕಿ ಸೌಮ್ಯರೆಡ್ಡಿ, ತುಳಿದುಕೊಂಡೇ ಮುನ್ನಡೆದ ಕಾರ್ಯಕರ್ತರು! ಕೈ ಪ್ರತಿಭಟನೆ ವೇಳೆ ಅವಘಡ

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − five =
Remember me
