ಬೆಳಗಾವಿ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದ 33 ಕಾಮಗಾರಿಗಳಿಗೆ ತಕ್ಷಣ ಅನುದಾನ ಬಿಡುಗಡೆಗೊಳಿಸಬೇಕು. ಅಲ್ಲದೆ, ಈ ಬಜೆಟ್.ನಲ್ಲಿ ರಾಜ್ಯ ಸರ್ಕಾರವು ಪ್ರಾಧಿಕಾರಕ್ಕೆ 200 ಕೋಟಿ ರೂ. ಅನುದಾನ ಮೀಸಲಿಡಬೇಕು ಎಂದು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಲಕ್ಕನ್ನ ಸವಸುದ್ದಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈತ್ರಿ ಸರ್ಕಾರವು ಕಿತ್ತೂರಿನ ಸಮಗ್ರ ಅಭಿವೃದ್ಧಿಗೆ ಆಸಕ್ತಿ ತಳೆದಿತ್ತು. 2018-19ನೇ ಸಾಲಿನಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ 8ನೇ ಹಂತದ 33 ಕಾಮಗಾರಿಗಳಿಗೆ 146.30 ಕೋಟಿ ರೂ. ಹಣಕಾಸು ಇಲಾಖೆ ಅನುಮೋದನೆ ನೀಡಿತ್ತು. ಆದರೆ, ಬಿಜೆಪಿ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಆಪಾದಿಸಿದರು.
ವರ್ಷಕ್ಕೊಮ್ಮೆ ಕಿತ್ತೂರು ಉತ್ಸವ ಆಚರಿಸಿ ಸುಮ್ಮನಾದರೆ ಸಾಲದು. ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆ ರೂಪಿಸಬೇಕಿದೆ ಎಂದು ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × four =
Remember me
