ಕಲಬುರಗಿ:ಹಾಡಹಗಲಲ್ಲೇ ಸರ್ಕಾರಿ ಸಾರಿಗೆ ಬಸ್​ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಕಲಬುರಗಿ ನಗರದ ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಾಗಯ್ಯಸ್ವಾಮಿ (45) ಕೊಲೆಯಾದ ಕೆಕೆಆರ್​ಟಿಸಿ ಬಸ್ ಚಾಲಕ. ಈತ ಅಫಜಲಪುರ ತಾಲ್ಲೂಕಿನ ಮದರಿ ಗ್ರಾಮದ ನಿವಾಸಿ. ಸಿಟಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿಯುತ್ತಿದ್ದಂತೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. KA-32, F-1652 ನಂಬರ್​ನ ಸಾರಿಗೆ ಬಸ್ ಅನ್ನು ನಾಗಯ್ಯಸ್ವಾಮಿ ಚಲಾಯಿಸುತ್ತಿದ್ದರು.
ಇದನ್ನೂ ಓದಿ:ಸೇನಾಧಿಕಾರಿ ಮನೆಗೆ ದಾಳಿ ಮಾಡಿ ಸಾಫ್ಟ್​ಡ್ರಿಂಕ್ಸ್, ತಿಂಡಿ-ತಿನಿಸು ಕದ್ದ ಇಮ್ರಾನ್ ಖಾನ್ ಬೆಂಬಲಿಗರು!
ದಾಳಿ ಮಾಡಿದಾಗ ಮೊದಲು ನಾಗಯ್ಯ ಸ್ವಾಮಿ ಕೈ ಹೆಬ್ಬೆರಳು ತುಂಡಾಗಿದೆ. ತಕ್ಷಣ ನಾಗಯ್ಯ ಅಲ್ಲಿಂದ ಓಡಿ ಹೋಗುತ್ತಿದ್ದಂತೆ ಬೆನ್ನಟ್ಟಿ ಹೋಗಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಯಿಂದಾಗಿ ಸಿಟಿ ಬಸ್ ನಿಲ್ದಾಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಅಮೃತಸರದಲ್ಲಿ ಒಂದೇ ವಾರದಲ್ಲಿ ಮೂರನೇ ಸ್ಫೋಟ! ಐವರ ಬಂಧನ…

ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ: ‘ಮತ್ತೆ ಮದುವೆ’ ಚಿತ್ರದ ಟ್ರೈಲರ್​ ಬಿಡುಗಡೆ

ಚಿಕನ್​ ತಿಂದು ತಗ್ಲಾಕ್ಕೊಂಡ ರಶ್ಮಿಕಾ! ಹಳೆಯ ವಿಡಿಯೋ ಕೆದಕಿ ಕಿರಿಕ್​ ಬ್ಯೂಟಿಗೆ ನೆಟ್ಟಿಗರ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + twenty =
Remember me
