ಹುಬ್ಬಳ್ಳಿ:ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್​ಮನ್, ಕನ್ನಡಿಗ ಕೆ.ಎಲ್. ರಾಹುಲ್(KL Rahul)ಪ್ರತಿಭಾವಂತ ಬಡ ವಿದ್ಯಾರ್ಥಿಯ ವಿದ್ಯಾಭ್ಯಾಸದ ಖರ್ಚನ್ನು ವಹಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗೆ ಆರ್ಥಿಕ ನೆರವು ನೀಡಿದ್ದಾರೆ.
ಇದನ್ನೂ ಓದಿ:ಮದುವೆಯಾದ ವಾರದೊಳಗೆ ಚಿನ್ನಾಭರಣದೊಂದಿಗೆ ವಧು ಎಸ್ಕೇಪ್​; ವರ್ಷದ ಬಳಿಕ ಓರ್ವ ಆರೋಪಿ ಅರೆಸ್ಟ್​
ಬಾಗಲಕೋಟೆ(Bagalkot)ಜಿಲ್ಲೆಯ ಮಹಾಲಿಂಗಪುರದ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿಗೆ ಕೆ.ಎಲ್.ರಾಹುಲ್ ಸಹಾಯ ಹಸ್ತ ನೀಡಿರುವುದು ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೌಟುಂಬಿಕ ಹಾಗೂ ಆರ್ಥಿಕ ಸಮಸ್ಯೆಯಿಂದ ಓದನ್ನು ಮುಂದುವರಿಸಲು ತೊಂದರೆ ಅನುಭವಿಸುತ್ತಿದ್ದ ವಿದ್ಯಾರ್ಥಿ ಅಮೃತ್​ಗೆ ಸಹಾಯ ಹಸ್ತ ನೀಡಿ ಮಾನವೀಯತೆ ಮೆರೆದಿದ್ದಾರೆ.

ಪ್ರಸಕ್ತ ವರ್ಷದ ವಿದ್ಯಾಭ್ಯಾಸಕ್ಕೆ 75 ಸಾವಿರ ರೂ. ಹಣ ನೀಡುವ ಮೂಲಕ ರಾಹುಲ್ ವಿದ್ಯಾರ್ಥಿಗೆ ಧೈರ್ಯ ಹೇಳಿದ್ದು, ಮುಂದಿನ ನಾಲ್ಕು ವರ್ಷಗಳ ವಿದ್ಯಾಭ್ಯಾಸದ ಖರ್ಚನ್ನು ತಾನೇ ವಹಿಸಿಕೊಳ್ಳುವುದಾಗಿ ವಿದ್ಯಾರ್ಥಿಯ ಕುಟುಂಬದವರಿಗೆ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಅಭಿಷೇಕ್-ಅವಿವಾ ಬೀಗರ ಊಟಕ್ಕೆ 15 ಎಕರೆ ಪ್ರದೇಶದಲ್ಲಿ ಸಿದ್ಧತೆ; 50 ಸಾವಿರ ಜನ ಬರುವ ನಿರೀಕ್ಷೆ
ಮೂಲತಃ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿ ಸದ್ಯ ಬಿ.ಕಾಂ(B.com)ವ್ಯಾಸಂಗ ಮಾಡುತ್ತಿದ್ದಾರೆ. ಬಿ.ಕಾಂ ಓದುವಿನ ಮಧ್ಯೆಯೇ ಸಿ.ಎ‌ ಓದಬೇಕೆಂಬುದು ವಿದ್ಯಾರ್ಥಿಯ ಕನಸು. ಪಿಯುಸಿಯಲ್ಲಿ 600ಕ್ಕೆ 571 ಅಂಕಗಳನ್ನು ಗಳಿಸುವ ಮುಖೇನ ಕಾಲೇಜಿಗೆ, ಪೋಷಕರಿಗೆ ಕೀರ್ತಿಯನ್ನು ತಂದಿದ್ದ ಅಮೃತ್​ಗೆ ಕೆ.ಎಲ್. ರಾಹುಲ್ ಅವರಿಂದ ಆರ್ಥಿಕ ಸಹಾಯ ಮತ್ತು ಪ್ರಶಂಸೆ ದೊರಕಿದೆ.
ವಿದ್ಯಾರ್ಥಿ ಅಮೃತ್ ಹುಬ್ಬಳ್ಳಿಯ ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬಸೂರು ಎಂಬುವವರ ಮೂಲಕ ಕ್ರಿಕೆಟಿಗ ಕೆ.ಎಲ್. ರಾಹುಲ್‌ ಅವರಿಂದ ಸಹಾಯ ಪಡೆದುಕೊಂಡಿದ್ದಾರೆ.
Video Viral | ತನಗೆ ಕಚ್ಚಿದ ಹಾವು ಯಾವುದೆಂದು ವೈದ್ಯರಿಗೆ ತೋರಿಸಲು ಈತ ಮಾಡಿದ್ದೇನು ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
