ನವದೆಹಲಿ:ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತನ್ನ ತಯಾರಿಯನ್ನು ಮುಂದುವರೆಸಿರುವ ಟೀಂ ಇಂಡಿಯಾ ಬ್ಯಾಟರ್ ಕೆಎಲ್ ರಾಹುಲ್ ಮುಂಬೈನಲ್ಲಿ ತಾಲೀಮು ನಡೆಸುತ್ತಿರುವುದು ಕಂಡುಬಂದಿದೆ. ಕೆಎಲ್ ರಾಹುಲ್ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಅಭ್ಯಾಸದ ನಡುವಿನಲ್ಲಿ ರಾಹುಲ್​ಗೆ ವಾಂತಿಯಾಗಿದೆ.
ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಒಡಿಐ ಸರಣಿಯಲ್ಲಿ ಟೀಮ್ ಇಂಡಿಯಾದ ನಾಯಕತ್ವದ ಜವಾಬ್ದಾರಿ ಕೆಎಲ್ ರಾಹುಲ್ ಅವರ ಮೇಲಿದೆ.  ಭಾರತದಲ್ಲಿರುವ ರಾಹುಲ್ ಮೈದಾನದಲ್ಲಿ ಬೆವರು ಹರಿಸಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.
ಇದೀಗ ರಾಹುಲ್ ಅಭ್ಯಾಸದ ವೇಳೆ ವಾಂತಿ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೆಎಲ್ ರಾಹುಲ್ ಆರೋಗ್ಯ ಈಗ ಹೇಗಿದೆ ಎಂಬ ಬಗ್ಗೆ ಮಾಹಿತಿಯಿಲ್ಲ. ಆದರೆ, ವಿಡಿಯೋದಲ್ಲಿ ಅವರು ಗುಣಮುಖರಾದಂತೆ ಕಾಣುತ್ತಿದೆ.
A post shared by KL Rahul👑 (@klrahul)
ಈ ಅಭ್ಯಾಸದ ಸಮಯದಲ್ಲಿ, ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಸಹ ಅವರೊಂದಿಗೆ ಇದ್ದರು. ಈ ವಿಡಿಯೋದಲ್ಲಿ ಬುಮ್ರಾ- ರಾಹುಲ್ ಸಂಭಾಷಣೆ ಕೂಡ ಇದೆ. ಸದ್ಯದಲ್ಲೇ ಭಾರತ ಏಕದಿನ ತಂಡ ಆಫ್ರಿಕಾ ನಾಡಿಗೆ ಪ್ರಯಾಣ ಬೆಳೆಸಲಿದೆ.
ರಜನಿಕಾಂತ್ ಮೂರ್ತಿಗೆ ಹಾಲಿನ ಅಭಿಷೇಕ; ವಿಶೇಷ ವಿಡಿಯೋ ನೋಡಿದ್ದೀರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
