
ಬೆಂಗಳೂರು:ಪ್ರತಿದಿನ ಕೆಎಂಎ್ ಹಾಲು ಸಂಗ್ರಹ 1 ಕೋಟಿ ಲೀಟರ್ ದಾಟಿರುವುದು ದಾಖಲೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗಿರುವುದು ಕೆಎಂಎ್ ಇತಿಹಾಸದಲ್ಲಿಯೇ ದೊಡ್ಡ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಅವರು ಕೆಎಂಎ್ ವತಿಯಿಂದ ಒಂದು ಕೋಟಿ ಲೀಟರ್ ಹಾಲು ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಮಾತನಾಡಿದರು.ರಾಜ್ಯದ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ.ಇತ್ತು. ಈಗ 1 ಕೋಟಿ ದಾಟಿದೆ ಎಂದರು.
ಹಾಲಿನ ಸೊಸೈಟಿಗಳು ರೈತರ ಸಂಘಟನೆ:ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.
ರೈತರಿಗೆ ನೆರವು:ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್‌ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2 ರೂಪಾಯಿ ಹೆಚ್ಚಿಸಲಾಗಿದೆ ಎಂದರು.
ವಿರೋಧ ಪಕ್ಷದ ಅಪಪ್ರಚಾರ:ಬೆಲೆ ಏರಿಕೆಯನ್ನು ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ ಎಂದರು.ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.
ಪ್ರತಿ ಲೀಟರ್‌ಗೆ 2 ರೂ.ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಅಶೋಕ್‌ಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆ ಎಂದರು.
ಹಾಲಿನ ದರ ಹೆಚ್ಚಳವಾಗಿಲ್ಲ:ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.ಗ್ರಾಹಕರಿಗೆ ಕೊಡುವ ಹಾಲಿನ ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ರಾಜ್ಯ ಮಾತ್ರ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six + fourteen =
Remember me
