ಬೆಂಗಳೂರು:ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಷಾ ಅವರು ಇದೆಲ್ಲವನ್ನೂ ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಮಂಡ್ಯದಲ್ಲಿ ಮೆಗಾ ಡೇರಿ ಉದ್ಘಾಟಿಲು ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಅಮುಲ್​ ಜತೆ ನಂದಿನಿ ವಿಲೀನದ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಚ್​ಡಿಕೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್​ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ, ಇದೀಗ ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ ಎಂದು ಸರಣಿ ಟ್ವೀಟ್​ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿಯು ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ. ಕೆಎಂಎಫ್​ ಕನ್ನಡಿಗರದ್ದು. ಇದು ನಮ್ಮ ಕೆಎಂಎಫ್ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಭಾನುವಾರ ಕೂಡ ಇದನ್ನೇ ಎಚ್​ಡಿಕೆ ಹೇಳಿದ್ದರು. ನಂದಿನಿ ಕನ್ನಡಿಗರ ಜೀವನಾಡಿ. ಇದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ ಎಂದಿದ್ದರು. ಇದೀಗ ಟ್ವೀಟ್​ ಮೂಲಕ ಮತ್ತೊಮ್ಮೆ ಅಮಿತ್​ ಷಾ ಅವರಿಗೆ ಎಚ್ಚರಿಸಿದ್ದಾರೆ.
ಶಿವಮೊಗ್ಗದ ಮನೆಯೊಂದರಲ್ಲಿ ಹೊಸ ವರ್ಷವನ್ನು ಸ್ವಾಗತಿಸಿದ ಕ್ಷಣಾರ್ಧದಲ್ಲೇ ಘೋರ ದುರಂತ! ಇಡೀ ಮನೆಯಲ್ಲಿ ಸೂತಕ ಛಾಯೆ

ಬೆಂಗಳೂರಲ್ಲಿ ಹೊಸ ವರ್ಷಕ್ಕೆ ಅದ್ದೂರಿ ಸ್ವಾಗತ: ಕುಡಿದ ಅಮಲಲ್ಲಿ ತೇಲಾಡಿದ ಕೆಲ ಯುವಕ-ಯುವತಿಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 16 =
Remember me
