ಬೆಂಗಳೂರು:ರೈತರಿಗೆ ಅನ್ಯಾಯವಾಗದಂತೆ ಮತ್ತು ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ಬೆಲೆ ಏರಿಕೆಗೆ ಸೂತ್ರ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೆಎಂಎಫ್​ಗೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಮಹಾ ಮಂಡಳ ಬುಧವಾರ (ನ.23) ಮತ್ತೆ ಆಡಳಿತ ಮಂಡಳಿ ಸಭೆಯನ್ನು ಕರೆದಿದ್ದು, ಲೀಟರ್​ಗೆ 2 ರೂ. ದರ ಹೆಚ್ಚಿಸುವ ಸಾಧ್ಯತೆ ಇದೆ.
ಪ್ರಸ್ತಾವಿತ ಪ್ರತಿ ಲೀಟರ್​ಗೆ 3 ರೂ. ಹೆಚ್ಚಳ ಮಾಡುವುದು ಬೇಡ. ರೈತರು ಮತ್ತು ಗ್ರಾಹಕರ ಹಿತ ಕಾಯುವ ದೃಷ್ಟಿಯಲ್ಲಿ ತೀರ್ಮಾನ ತೆಗೆದುಕೊಳ್ಳುವಂತೆ ಸಲಹೆ ನೀಡಿರುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಮತ್ತೊಮ್ಮೆ ಬೆಲೆ ಏರಿಕೆ ವಿಚಾರವನ್ನು ಪರಾಮರ್ಶೆ ಮಾಡಿದ ತೀರ್ವನವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಂತರ ಬೆಲೆ ಏರಿಕೆ ಪ್ರಕಟಿಸಲಾಗುವುದು ಎಂದು ಕೆಎಂಎಫ್ ಮೂಲಗಳು ತಿಳಿಸಿವೆ. ಸಂಸ್ಥೆಯಲ್ಲಿ ಆಗುತ್ತಿರುವ ಸೋರಿಕೆ ತಡೆಯಲು ಮತ್ತು ನಷ್ಟಗಳನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಗುವುದು ಎಂದು ತಿಳಿಸಿದೆ.
ಮಾಹಿತಿ ಪಡೆದ ಸಿಎಂ:ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸತೀಶ್ ನೇತೃತ್ವದ ಅಧಿಕಾರಿಗಳ ತಂಡದ ಜತೆಗೆ ಚರ್ಚೆ ನಡೆಸಿದ ಸಿಎಂ, ಬೆಲೆ ಏರಿಕೆ ಅನಿವಾರ್ಯತೆಯ ಮಾಹಿತಿ ಪಡೆದುಕೊಂಡರು. ಕೋವಿಡ್ ಸಂದರ್ಭ ಸೇರಿದಂತೆ ಕಳೆದ 2 ವರ್ಷ 10 ತಿಂಗಳಿಂದ ಹಾಲಿನ ಬೆಲೆಯನ್ನು ಹೆಚ್ಚಳ ಮಾಡಿಲ್ಲ. ಹೈನುರಾಸುಗಳ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಳವಾಗಿದೆ. ಪಶು ಆಹಾರ ಉತ್ಪಾದನೆಗೆ ಬಳಸುವ ಮೆಕ್ಕೆಜೋಳ, ಅಕ್ಕಿ ತೌಡು, ಹತ್ತಿಕಾಳು, ಹಿಂಡಿ, ಖನಿಜ ಪದಾರ್ಥಗಳು ಶೇ.30ರಷ್ಟು ಏರಿಕೆ ಆಗಿದ್ದು, ರೈತರಿಗೆ ಹೈನುಗಾರಿಕೆ ಹೊರೆಯಾಗುತ್ತಿದೆ. ಆದ್ದರಿಂದ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಕೆಎಂಎಫ್ ಸಮರ್ಥಿಸಿಕೊಂಡಿದೆ. ಕೆಎಂಎಫ್ ಸರ್ವ ಸದಸ್ಯರ ಸಭೆ ಮತ್ತು ಆಡಳಿತ ಮಂಡಳಿ ಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ಸರ್ವಾನುಮತದಿಂದ ತೀರ್ವನಿಸಿ ನಂದಿನಿ ಬ್ರಾಂಡ್​ನ ಹಾಲು ಮತ್ತು ಮೊಸರಿನ ಬೆಲೆ ಪ್ರತಿ ಲೀಟರ್​ಗೆ 3 ರೂ ಹೆಚ್ಚಳ ಮಾಡಲು ಉದ್ದೇಶಿಸಲಾಗಿತ್ತು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಲೆ ಏರಿಕೆ ಅನಿವಾರ್ಯತೆಯ ಬಗ್ಗೆ ವಿವರಣೆ ನೀಡಿದ್ದಾರೆ.
ಹಾಲಿನ ದರ ಪರಿಷ್ಕರಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ರೈತರು ಮತ್ತು ಗ್ರಾಹಕರ ಹಿತ ದೃಷ್ಟಿಯನ್ನು ಗಮನದಲ್ಲಿಟ್ಟು ಕೊಂಡು ತೀರ್ಮಾನ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಕೆಎಂಎಫ್ ಕೂಡ ಸರ್ಕಾರದ ಅಂಗ. ಹಾಲಿಗೆ ಸರ್ಕಾರವೇ ಪ್ರೋತ್ಸಾಹಧನ ಕೊಡುತ್ತಿದೆ. ಕ್ಷೀರಭಾಗ್ಯ ಯೋಜನೆ ಜಾರಿಗೊಳಿಸಿದೆ. ಹೀಗಾಗಿ ಸರ್ಕಾರ ಮಾರ್ಗದರ್ಶನ ನೀಡಿದೆ.
|ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ
24ರಿಂದ ಹೊಸ ದರ:ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಹಾಲು ಒಕ್ಕೂಟಗಳು ಲೀಟರ್​ಗೆ 3 ರೂ. ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದವು. ಅವುಗಳನ್ನು 2 ರೂ.ಗೆ ಒಪ್ಪಿಸಬೇಕಾಗಿರುವುದರಿಂದ ನ.23ಕ್ಕೆ ಸಭೆ ನಡೆಯಲಿದೆ. ಮತ್ತೆ ಸರ್ಕಾರದ ಅನುಮತಿ ಬೇಕಿಲ್ಲದ ಕಾರಣ ನ.24 ರಿಂದ ಹೊಸದರ ಜಾರಿಗೆ ಬರಲಿದೆ ಎಂದು ಮೂಲಗಳು ಹೇಳಿವೆ.
ಬೆಂದಕಾಳೂರು ಥಂಡಾ: 10 ವರ್ಷಗಳ ನಂತರ ಬೆಂಗಳೂರಲ್ಲಿ ಅತಿ ಕಡಿಮೆ ಉಷ್ಣಾಂಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
