ತುಮಕೂರು:ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕಾಂಗ್ರೆಸ್​ ಹೈಕಮಾಂಡ್​ಗೆ ಪತ್ರ ಬರೆಯಲಾಗುವುದು. ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ರಾಜಣ್ಣ ಅಕ್ಟೋಬರ್​ ಮೊದಲ ವಾರದಲ್ಲಿ ಈ ಸಂಬಂಧ ಕಾಂಗ್ರೆಸ್​ ಹೈಕಮಾಂಡ್​ಅನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಸನಾತನ ಧರ್ಮ ಹೇಳಿಕೆ; ಉದಯನಿಧಿ ಸ್ಟಾಲಿನ್​ಗೆ ಚಾಟಿ ಬೀಸಿದ ಮದ್ರಾಸ್​ ಹೈಕೋರ್ಟ್​
ಪರಿಶಿಷ್ಟ ಜಾತಿ-ಪಂಗಡ, ವೀರಸೈವ-ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯದಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಹೈಕಮಾಂಡ್​ಗೆ ಮನವಿ ಸಲ್ಲಿಸಲಾಗುವುದು. ಈ ವಿಚಾರವಾಗಿ ಅಕ್ಟೋಬರ್​ ಮೊದಲ ವಾರದಲ್ಲಿ ಹೈಕಮಾಂಡ್​ ಭೇಟಿ ಮಾಡಿ ಮನವರಿಕೆ ಮಾಡಲಾಗುವುದು. ಈ ವಿಚಾರಕ್ಕೆ ಸಹಮತ ವ್ಯಕ್ತಪಡಿಸಿರುವ ಮುಖಂಡರ ನಿಯೋಗವನ್ನು ಹೈಕಮಾಂಡ್​ ಬಳಿಗೆ ಕರೆದುಕೊಂಡು ಹೋಗಲಾಗುವುದು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾವು ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಈ ಸಂಬಂಧ ಎಲ್ಲಾ ಸಮುದಾಯದ ಬೆಂಬಲ ನಮಗೆ ಬೇಕಾಗುತ್ತದೆ. ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ನಮಗೆ ಹಚ್ಚಿನ ಅನುಕೂಲವಾಗಲಿದೆ. ಈ ಮಾತನ್ನು ನಾನು ಡಿ.ಕೆ. ಶಿವಕುಮಾರ್​ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್​ ವಿರುದ್ಧ ನೀಡುತ್ತಿಲ್ಲ. ಇತರರಿಗೂ ಅವಕಾಶ ನೀಡಬೇಕೆಂದು ಕೇಳುತ್ತಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − thirteen =
Remember me
