ಬೆಂಗಳೂರು : ಕೋಲಾರ ಸಮಗ್ರ ಕೃಷಿ ಪದ್ಧತಿಯಡಿಯೇ ಇಸ್ರೇಲ್ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ಕುರಿತು ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.
ವಿಕಾಸಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಇಸ್ರೇಲ್ ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಹಾಗೂ ಮಿಷನ್ ಉಪಮುಖ್ಯಸ್ಥ ಏರಿಯನಲ್ ಸೀಡ್ಮನ್ ಜತೆ ಚರ್ಚಿಸಿ ಮಾತನಾಡಿದರು.  ಕೋಲಾರ ರೈತರು ಅತ್ಯಂತ ಕಡಿಮೆ ನೀರಿನಲ್ಲಿಯೇ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ರಾಜ್ಯದಲ್ಲಿ ಕೋಲಾರ ಸಮಗ್ರ ಕೃಷಿ ಪದ್ಧತಿಯಡಿಯಲ್ಲಿಯೇ ಇಸ್ರೇಲ್ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ಬಗ್ಗೆ ಇಸ್ರೇಲ್ ಪ್ರತಿನಿಧಿಗಳ ಜತೆ ಮಾಹಿತಿ ಹಂಚಿಕೊಂಡಿದ್ದು, ಮುಂದಿನ ಹೆಜ್ಜೆ ಕುರಿತು ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮಕೈಗೊಳ್ಳುವುದಾಗಿ ಹೇಳಿದರು.
ಸಹಭಾಗಿತ್ವ ಕುರಿತು ಮಹತ್ವದ ಚರ್ಚೆ:  ಕೃಷಿ ಕ್ಷೇತ್ರದಲ್ಲಿ ಇಸ್ರೇಲ್ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಸಹಭಾಗಿತ್ವ ಮತ್ತು ಮುಂದಿನ ದಾರಿ ಕುರಿತು ಮಹತ್ವದ ಚರ್ಚೆ ನಡೆಸಿದರು.
ಸೆನ್ಸಾರ್ ಸೂಕ್ಷ್ಮ ನೀರಾವರಿ ಪದ್ಧತಿ: ಕೊಡಗಿನಲ್ಲಿ ಆಧುನಿಕ ಸೆನ್ಸಾರ್ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಈಗಾಗಲೇ ಇಸ್ರೇಲ್ ಸಹಭಾಗಿತ್ವದಲ್ಲಿ ಕಾಫಿ ಬೆಳೆಯಲ್ಲಿ ಅಳವಡಿಸಲಾಗುತ್ತಿದೆ. ಇದನ್ನು ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಅಳವಡಿಸಲು ಉತ್ತೇಜನ ನೀಡಬೇಕೆಂದು ಇಸ್ರೇಲ್ ಕಾನ್ಸುಲೇಟ್ ಪ್ರತಿನಿಧಿಗಳು ಮನವಿ ಮಾಡಿದರು.
ವಿ.ವಿ.ಗಳ ಜತೆ ಒಡಂಬಡಿಕೆ: ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಹಾಗೂ ಇಸ್ರೇಲ್‌ನ ಟೆಲಿವಿವಾ ವಿಶ್ವವಿದ್ಯಾಲಯ , ಮಾಶೋಮ್ ತರಬೇತಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಸಚಿವರ ಜತೆ ಸಮಾಲೋಚನೆ ನಡೆಸಿದರು.
ಇಸ್ರೇಲ್ ಪ್ರತಿನಿಧಿಗಳ ಮೆಚ್ಚುಗೆ: ರೈತರನ್ನು ರೈತೋದ್ಯಮಿಗಳನ್ನಾಗಿಸಲು ಕೃಷಿ ನವೋದ್ಯಮಕ್ಕೆ ಇಲಾಖೆ ಹಾಗೂ ಕೃಷಿ ಸಚಿವರು ಉತ್ತೇಜನ ನೀಡುತ್ತಿರುವುದಕ್ಕೆ ಇಸ್ರೇಲ್ ಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 4 =
Remember me
