ಕೋಲಾರ:ಉನ್ನತ ಸ್ಥಾನದಲ್ಲಿದ್ದುಕೊಂಡು ಇತರರಿಗೆ ಬುದ್ಧಿ ಹೇಳಬೇಕಾದ ಪೊಲೀಸ್​ ಅಧಿಕಾರಿಯೇ ಕುಡಿದು ರಂಪಾಟ ಮಾಡಿರುವ ಘಟನೆ ಕೋಲಾರ ನಗರದ ಬಂಗಾರಪೇಟೆ ಸರ್ಕಲ್​​ನಲ್ಲಿರುವ ಸಾಮ್ರಾಟ್ ಅಶೋಕ ಬಾರ್ ಬಳಿ ಕಳೆದ ರಾತ್ರಿ ನಡೆದಿದೆ.
ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ನಾರಾಯಣಸ್ವಾಮಿ ಕುಡಿದ ಮತ್ತಿನಲ್ಲಿ ಬಾರ್​ ಸಿಬ್ಬಂದಿ ಜತೆ ಗಲಾಟೆ ಮಾಡಿಕೊಂಡು ಹಲ್ಲೆ ಯತ್ನಿಸಿದ್ದಾರೆ. ಕಾನೂನು ಪರಿಪಾಲನೆ ಮಾಡಬೇಕಾದ ಪೋಲಿಸಪ್ಪನಿಂದಲೇ ಗುಂಡಾ ವರ್ತನೆ ಪ್ರದರ್ಶನವಾಗಿದೆ.
ಕಂಠಪೂರ್ತಿ ಕುಡಿದಿದ್ದ ಎಎಸ್​ಐ, ಬಾರ್ ಸಿಬ್ಬಂದಿ ನಮಸ್ಕಾರ ಹೇಳಿಲ್ಲ ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಲ್ಲಿನಿಂದ ಹೊಡೆಯಲು ಮುಂದಾಗಿದ್ದರು. ಸ್ಥಳದಲ್ಲಿ ಭಾರೀ ಹೈಡ್ರಾಮ ಮಾಡಿದಲ್ಲದೆ, ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಬಾರ್ ಕ್ಯಾಶಿಯರ್ ಶೇಷು ನಾಯಕ್ ಹಾಗೂ ಸಿಬ್ಬಂದಿ ಸಂತೋಷ್ ವಿರುದ್ಧ ಪ್ರಕರಣ ಸಹ ದಾಖಲಿಸಿದ್ದಾರೆ.
ಎಎಸ್​ಐ ರಂಪಾಟದ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಎಎಸ್​ಐ ವಿರುದ್ಧ ಕೋಲಾರ ಬಾರ್ ಅಸೋಸಿಯೇಷನ್ ಅಧ್ಯಕ್ಷ ಚಲಪತಿ ಅವರು ಕೋಲಾರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಊರುಗಳತ್ತ ಹೊರಟ ಜನರು: ಕೆಎಸ್‌ಆರ್‌ಟಿಸಿ ಬಸ್‌ಗಳು ಫುಲ್ ರಶ್

ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಾಲಕ : ಜೀಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
