ಕೋಲಾರ:ಬಾರ್​ ಸಿಬ್ಬಂದಿ ತನಗೆ ನಮಸ್ಕಾರ ಮಾಡಲಿಲ್ಲ ಎಂದು ಕುಪಿತಗೊಂಡ ಎಎಸ್ಐ, ಕುಡಿದ ಮತ್ತಿನಲ್ಲಿ ಸಿಬ್ಬಂದಿ ಮೇಲೆ ಗೂಂಡಾ ವರ್ತನೆ ಮಾಡಿರುವ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಅಧಿಕಾರಿ ಗುರಿಯಾಗಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಸರ್ಕಲ್​ನ ಅಶೋಕ ಬಾರ್​ನಲ್ಲಿ ಸಂಭವಿಸಿದೆ.
ಇದನ್ನೂ ಓದಿ:ನಾಯಕತ್ವ ಬೆಳೆಸಲು ಎನ್​.ಎಸ್​.ಎಸ್​. ಸಹಾಯಕಾರಿ: ಎಂ. ಎಸ್​. ಮುಲ್ಲಾ
ರಾತ್ರಿ ವೇಳೆ ಈ ಘಟನೆ ಸಂಭವಿಸಿದ್ದು, ಬಾರ್​ ಸಿಬ್ಬಂದಿ ನಮಸ್ಕಾರ ಮಾಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕುಡಿದ ಅಮಲಿನಲ್ಲಿ ಎಎಸ್​ಐ ಅಂಗಡಿ ಮುಂದೆ ಗಲಾಟೆ ಮಾಡಿದ್ದಾರೆ. ಸಿಬ್ಬಂದಿಯೊಡನೆ ತೀವ್ರ ವಾಗ್ವಾದಕ್ಕಿಳಿದ ಅಧಿಕಾರಿ, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಈ ದೃಶ್ಯವನ್ನು ಸ್ಥಳೀಯರು ಮೊಬೈಲ್​ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.
ಘಟನೆಯ ಬೆನ್ನಲ್ಲೇ ಎಎಸ್​ಐ ಅಧಿಕಾರಿ ನಾರಾಯಣಸ್ವಾಮಿ ವಿರುದ್ಧ ಎಸ್​ಪಿಗೆ ಬಾರ್​ ಆಸೋಸಿಯೆಷನ್​ ದೂರು ನೀಡಿದೆ. ಸಿಬ್ಬಂದಿಯೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದ ಅಧಿಕಾರಿ, ಅಲ್ಲೇ ಇದ್ದ ಕಲ್ಲನ್ನು ಕೈಗೆತ್ತಿಕೊಂಡು ಎಸೆಯಲು ಕೂಡ ಯತ್ನಿಸಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 2 =
Remember me
