ಕೋಲಾರ:ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಕಾಂಗ್ರೆಸ್​ ಪಕ್ಷಕ್ಕೆ ಒಂದಿಲ್ಲೊಂದು ಸಂಕಷ್ಟು ಎದುರಾಗುತ್ತಿದ್ದು, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್​ಗೆ ಕಗ್ಗಂಟ್ಟಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿನ ಬಣ ರಾಜಕೀಯ ರಾಷ್ಟ್ರೀಯ ನಾಯಕರ ಗಮನ ಸೆಳೆದಿದ್ದು ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯಪ್ರವೇಶಿಸಿದರೂ ಬಂಡಾಯ ಶಮನವಾಗುವಂತೆ ಕಾಣುತ್ತಿಲ್ಲ.
ಮಹತ್ವದ ಬೆಳವಣಿಗೆಯಲ್ಲಿ ಕೋಲಾರ ಲೋಕಸಭಾ ಟಿಕೆಟ್​ಅನ್ನು ಸಚಿವ ಮುನಿಯಪ್ಪ ಅವರ ಅಳಿಯ ಚಿಕ್ಕಪೆದ್ದಣ್ಣಗೆ ನೀಡಿದ್ದಲ್ಲಿ ಜಿಲ್ಲೆಯ ಐವರು ಶಾಸಕರು ರಾಜೀನಾಮೆ ನೀಡುವುದಾಗಿ ಕೋಲಾರ ಕ್ಷೇತದ ಶಾಸಕ ಕೊತ್ತೂರು ಮಂಜುನಾಥ್​ ಬೆದರಿಕೆ ಹಾಕಿದ್ದಾರೆ.
ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ಮಂಜುನಾಥ್, ಸಚಿವ ಕೆ.ಹೆಚ್​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡದಂತೆ ಕಾಂಗ್ರೆಸ್​ ಹೈಕಮಾಂಡ್​ಗೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್​ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್​​​ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್​​ ರಾಜೀನಾಮೆ ನೀಡುತ್ತೇವೆ ಎಂದು ಸ್ಪಷ್ಟವಾಗಿ ಹೇಳಿದ್ದೇವೆ.
ಇದನ್ನೂ ಓದಿ:ಎಎಪಿ ಪ್ರತಿಭಟನೆಯನ್ನು ಕವರ್​ ಮಾಡುತ್ತಿದ್ದ ಫೋಟೋ ಜರ್ನಲಿಸ್ಟ್​ಗಳ ಮೇಲೆ ಪೊಲೀಸರಿಂದ ಹಲ್ಲೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ನಮ್ಮ ಬಣಕ್ಕೆ ಟಿಕೆಟ್ ನೀಡುವಂತೆ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ದು. ಹೈಕಮಾಂಡ್​ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ನಾನು, ರಮೇಶ್​​ಕುಮಾರ್ ಸೇರಿ ಒಟ್ಟಿಗೆ ಕೆಲಸ ಮಾಡುವುದಾಗಿ ಹೇಳಿದ್ದೇವೆ.
ಒಂದು ವೇಳೆ ಮುನಿಯಪ್ಪ ಕುಟುಂಬಕ್ಕೆ ಟಿಕೆಟ್​ ನೀಡಿದ್ದಲ್ಲಿ 12 ಗಂಟೆಗೆ ಸುಮಾರಿಗೆ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಶಾಸಕ ಮಂಜುನಾಥ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
