ಕೋಲಾರ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಸದ್ಯಕ್ಕೆ ವರುಣಾ, ಬಾದಾಮಿ ಹಾಗೂ ಕೋಲಾರ ಮೂರು ಕ್ಷೇತ್ರಗಳ ಆಯ್ಕೆ ಸಿದ್ದರಾಮಯ್ಯರ ಮುಂದಿದೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸುವಂತೆ ಭಾರಿ ಒತ್ತಡ ಬಂದಿದ್ದು, ಅಲ್ಲಿನ ಜನರ ನಾಡಿಮಿಡಿತ ಅರಿಯುವ ಸಲುವಾಗಿ ಇಂದು ಕೋಲಾರಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ.
ಚುನಾವಣಾ ಪ್ರಚಾರಕ್ಕೆಂದು ಸಿದ್ದಪಡಿಸಿರುವ ವಿಶೇಷ ಬಸ್​ನಲ್ಲಿ ಕೋಲಾರಕ್ಕೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸ್ಥಳೀಯ ಮುಖಂಡರು ಅದ್ಧೂರಿಯಾಗಿ ಬರಮಾಡಿಕೊಂಡರು. ಮಹಿಳೆಯರು ಕಳಶ ಹೊತ್ತು ಪೂರ್ಣಕುಂಭ ಸ್ವಾಗತ ಕೋರಿದರು. ಬಳಿಕ ಕೋಲಾರ ನಗರದ ಶಕ್ತಿ ದೇವತೆ ಕೋಲಾರಮ್ಮನಿಗೆ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು.
ಕೋಲಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಕೆ ನಂತರ ನಗರದ ಮೆಥೋಡಿಸ್ಟ್ ಚರ್ಚ್​ಗೆ ಸಿದ್ದರಾಮಯ್ಯ ಭೇಟಿ ನೀಡಿದರು. ಈ ವೇಳೆ ಸುಮಾರು 300 ಕೆಜಿ ಆಪಲ್ ಹಾರ ಹಾಕಿ ಕ್ರಿಶ್ಚಿಯನ್​ ಮುಖಂಡರು ಸ್ವಾಗತ ಕೋರಿದರು. ಅಲ್ಲದೆ, ಚರ್ಚ್​ನ ಫಾದ್ರಿ ಸಿದ್ದರಾಮಯ್ಯ ಅವರಿಗೆ ಶಾಲು ಮತ್ತು‌ ಪೇಟೆ‌ ಹಾಕಿ ಏಸು ಪ್ರತಿಮೆಯನ್ನು ನೀಡಿ ಸನ್ಮಾನ ಮಾಡಿದರು.
ಕೋಲಾರದ ಮೆಥೋಡಿಸ್ಟ್ ಚರ್ಚ್​ನಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ, ಕೋಲಾರಕ್ಕೆ ಬರುವಂತೆ ರಮೇಶ್ ಕುಮಾರ್ ಹಾಗು ಶಾಸಕರು ಸ್ವಾಗತಿಸಿದ್ದಾರೆ. ಇಂದು ಕೋಲಾರ ಭೇಟಿ ವೇಳೆ ನನಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಕೋಲಾರದಲ್ಲಿ ಸ್ಪರ್ಧೆ ಮಾಡುವಂತೆ ನನ್ನ ಮೇಲೆ ಒತ್ತಡ ಇದೆ. ನಾನೂ ಈಗ ಬಾದಾಮಿ ಕ್ಷೇತ್ರದ ಶಾಸಕನಾಗಿದ್ದೇನೆ. ವರುಣಾ ಹಾಗೂ ಬಾದಾಮಿಯಿಂದಲೂ ಸ್ಪರ್ಧೆಗೆ ಮನವಿಯಿದೆ. ನಾನು ಕೋಲಾರದ ಜನತೆಗೆ ಅಭಾರಿಯಾಗಿದ್ದೇನೆ ಎಂದರು.
ನಾನು 5 ವರ್ಷ ಮುಖ್ಯಮಂತ್ರಿ ಆಗಿದ್ದೆ. ಎಲ್ಲಾ ಜನತೆಯನ್ನ ಸಮಾನವಾಗಿ ಕಂಡಿದ್ದೆ, ಬಡವರ ಪರವಾಗಿದ್ದೆ. ನಾನು ಧರ್ಮದ ಆಧಾರದಲ್ಲಿ ಕೆಲಸ ಮಾಡಿಲ್ಲ. ಈ ದೇಶ ಬಹುತ್ವದ ದೇಶ. ಮನುಷ್ಯರು ಮತ್ತೊಬ್ಬ ಮನುಷ್ಯರನ್ನು ಪ್ರೀತಿಸಬೇಕು. ಆದರೆ, ಬಿಜೆಪಿ ಧರ್ಮದ ಆಧಾರದಲ್ಲಿ ರಾಜಕೀಯ ಮಾಡ್ತಿದೆ.ಕಾಂಗ್ರೆಸ್ ಪಕ್ಷ ಭಾರತದಲ್ಲಿ ಸರ್ವಧರ್ಮ ಸಮಾನತೆ ಕಾಣುತ್ತಿದೆ. ನನ್ನ ಸರ್ಕಾರದಲ್ಲಿ ನಾನು ಎಂದೂ ಭೇದ-ಬಾವ ಮಾಡಿಲ್ಲ, ಮುಂದೆಯೂ ಮಾಡಲ್ಲ. ನನ್ನ 5 ವರ್ಷ ಆಡಳಿತವನ್ನು ನೀವು ನೋಡಿದ್ದೀರಿ, ಸಂವಿಧಾನದ ಅಡಿ ನಾವೆಲ್ಲ ಕೆಲಸ ಮಾಡಬೇಕು. ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಪರವಾಗಿ ನಾವಿರುತ್ತೇನೆ. ನಾನು ನಾಮಿನೇಷನ್ ಹಾಕಬೇಕು ಅಂದಾಗ ಮತ್ತೆ ಚರ್ಚ್​ಗೆ ಬರ್ತೀನಿ ಎಂದು ಹೇಳುವ ಮೂಲಕ ಕೋಲಾರದಿಂದ ಸ್ಪರ್ಧಿಸುವ ಸುಳಿವು ಬಿಟ್ಟುಕೊಟ್ಟರು.(ದಿಗ್ವಿಜಯ ನ್ಯೂಸ್​)
ಆರ್​ಟಿಐಗೂ ಬಗ್ಗದ ಭ್ರಷ್ಟರು; ಮಾಹಿತಿ ಕೊಡಲು ಅಧಿಕಾರಿಗಳ ಕಳ್ಳಾಟ | ನೆಪವೊಡ್ಡಿ ಅರ್ಜಿಗಳ ತಿರಸ್ಕಾರ

ಶೀಘ್ರದಲ್ಲೇ ಸಾನಿಯಾ-ಶೋಯಿಬ್​… ಡಿವೋರ್ಸ್​ ವದಂತಿಗೆ ಸ್ಫೋಟಕ ತಿರುವು ಕೊಟ್ಟ ಉರ್ದುಫ್ಲಿಕ್ಸ್​!

ತಾಯಿಯಾದ ಸಂತಸದಲ್ಲಿ ಬಿಪಾಶಾ; ಹೆಣ್ಣು ಮಗು ಜನಿಸುತ್ತಿದ್ದಂತೆ ಹೆಸರಿಟ್ಟ ನಟಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 20 =
Remember me
