ಬೆಂಗಳೂರು:ರಾಜ್ಯ ಬಿಜೆಪಿ (BJ))ಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ (B S Yediyurappa) ಅವರನ್ನು ಸೈಡ್​ ಲೈನ್​ ಮಾಡಲಾಗುತ್ತಿದೆ ಎಂಬ ಮಾತುಗಳು ಕೆಲ ದಿನಗಳಿಂದ ಕೇಳಿಬರುತ್ತಿದೆ. ಅಲ್ಲದೆ, ಇತ್ತೀಚೆಗೆ ಅವರು ಪಕ್ಷದ ಕೆಲ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳದಿರುವುದು ಸಹ ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ರಾಜಕೀಯ ವಲಯದಲ್ಲಿ ಬಿಎಸ್​ವೈ (BSY) ಬಗ್ಗೆ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳ ಮುಂದೆ ಪ್ರತ್ಯಕ್ಷರಾಗಿರುವ ಬಿಎಸ್​ವೈ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಕೊಪ್ಪಳ (Koppal)ಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ನಮ್ಮ ನಡುವೆ ಯಾವುದೇ ಗೊಂದಲವಿಲ್ಲವೆಂದು ಹೇಳಿದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ (JP Nadda) ಅವರು ಇಂದು ಕೊಪ್ಪಳಕ್ಕೆ ಬರ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಬೇರೆ ಕಾರಣಕ್ಕೆ ನಾನು ಇವತ್ತು ಕಾರ್ಯಕ್ರಮಕ್ಕೆ ಹೋಗದೇ ಇರೋ ಸ್ಥಿತಿ ಇತ್ತು‌. ಆದರೆ, ಹೋಗಲೇ ಬೇಕು ಅನ್ನೋ ಸ್ಥಿತಿ ಬಂದಿದ್ದರಿಂದ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಸಿಎಂ ಕೂಡ ಕಾರ್ಯಕ್ರಮಕ್ಕೆ ಬರ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಮತ್ತು ಗೊಂದಲಗಳು ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡುವುದಕ್ಕೆ ಹೋಗಬೇಡಿ. ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ ಎಂದು ಬಿಎಸ್​ವೈ ಸ್ಪಷ್ಟನೆ ನೀಡಿದರು.
ಮುಂದೆ ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election) ಇದೆ. ಪಕ್ಷವನ್ನ ಅಧಿಕಾರಕ್ಕೆ ತರಬೇಕು ಎಂಬುದೇ ನಮಗಿರುವ ಒಂದೇ ಅಜೆಂಡಾ. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕ್ತೀನಿ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ. ಮೋದಿ, ಅಮಿತ್ ಶಾ ಹಾಗೂ ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದರು.
ನನ್ನನ್ನು ಪಕ್ಷ ನಿರ್ಲಕ್ಷಿಸಿಲ್ಲ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ‌ಕಾರ್ಯಕ್ರಮಗಳಿಗೆ ನಾನು ಹೋಗ್ತಾ ಇದ್ದೀನಿ. ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗೋದು ಸರಿಯಲ್ಲ ಅಂತ ಹೋಗಿಲ್ಲ ಅಷ್ಟೆ. ಆದರೆ, ಸಾರ್ವಜನಿಕ ಸಭೆ ಸಮಾರಂಭಗಳಿಗೆ ನನ್ನನ್ನ ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡ್ತೀನಿ. ಈ ಕಾರ್ಯಕ್ರಮಕ್ಕೆ ಕೊನೆಯ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗೋ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ. ನಡ್ಡಾ ಬರ್ತಿದ್ದಾರೆ ಅದಕ್ಕೆ ಹೋಗ್ತಿದ್ದೇನೆ ಎಂದು ಹೇಳಿದರು.
ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಎಸ್​ವೈ, ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೆ ಮುಂದುವರೆಸುತ್ತೇನೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ತಿಳಿಸಿದರು.
ಅಶ್ಲೀಲ ವಿಡಿಯೋ ತೋರಿಸಿ, ಅಂಗಾಂಗ ಮುಟ್ಟಿ ದೌರ್ಜನ್ಯ: ಮಂಡ್ಯದಲ್ಲಿ ಮುಖ್ಯಶಿಕ್ಷಕನ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು

ರಾಜಧಾನಿಯಲ್ಲಿ ನಕಲಿ ವೈದ್ಯನ ಅವಾಂತರ: ಜ್ವರಕ್ಕೆ ಇಂಜೆಕ್ಷನ್ ಪಡೆದ ಯುವತಿಗೆ ನಿತ್ಯವು ನರಕಯಾತನೆ

ಅನೈತಿಕ ಸಂಬಂಧ ಸಾಬೀತಿಗೆ 3ನೇ ವ್ಯಕ್ತಿಯ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
