ಕೊಪ್ಪಳ:ಇಂದು ಕೊಪ್ಪಳದ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ರಥೋತ್ಸವ ಹಿನ್ನೆಲೆ ಸಾವಿರಾರು ಭಕ್ತರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ದೇವಿ ದರ್ಶನಕ್ಕಾಗಿ ಗ್ರಾಮಕ್ಕೆ ಪಾದಯಾತ್ರೆಗಳಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಉಳಿದವರ ಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:ತಂಬಾಕುಮುಕ್ತ ಮನೆ ನಿರ್ಮಾಣವಾಗಲಿ: ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಸಲಹೆ
ಘಟನೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಕೊಪ್ಪಳ ತಾಲೂಕಿನ ಕೆರೆಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಭಕ್ತರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಯಮನೂರಪ್ಪ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಾಂತೇಶ ಎನ್ನುವವರಿಗೆ ಕಾಲು ಮುರಿದಿದೆ. ಸದ್ಯದ ಮಾಹಿತಿಯ ಪ್ರಕಾರ, ಮಹಾಂತೇಶ್ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಇದೀಗ ಅವರನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ.
ಅಪಘಾತದಲ್ಲಿ ತುತ್ತಾದವರು ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳೆಂದು ಮಾಹಿತಿ ಸಿಕ್ಕಿದ್ದು, ಮುನಿರಾಬಾದ್ ಪೋಲಿಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಈ 6 ಸ್ಟಾರ್​ ಆಟಗಾರರು ಟಿ20 ವಿಶ್ವಕಪ್​ನಲ್ಲಿ ಡಬಲ್ ಸೆಂಚುರಿ ಸಿಡಿಸುವ ನಿರೀಕ್ಷೆಯಿದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nine =
Remember me
