ಬೆಂಗಳೂರು:ಕೊರಮು, ಕೊರಚ, ಬೋವಿ ಮತ್ತು ಲಂಬಾಣಿ ಜನಾಂಗವನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡದಂತೆ ಕೋರಿ ಲಕ್ಷಾಂತರ ಮಂದಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದ್ದಾರೆ.
ಕೊರಚ, ಕೊರಮ, ಭೋವಿ ಮತ್ತು ಲಂಬಾಣಿ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈ ಬಿಡುವಂತೆ ಕೇಂದ್ರ ಸರ್ಕಾರ ಸೂಚನೆ ಹೊರಡಿಸಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಈ ಜನಾಂಗದವರು ಈಗ ಪತ್ರ ಚಳವಳಿ ನಡೆಸಿದ್ದಾರೆ.
ಈ ಸಂಬಂಧ ಈ ಜಾತಿಗಳನ್ನು ಪರಿಶಿಷ್ಟ ಜಾತಿಯಿಂದ ಕೈಬಿಡದಂತೆ ಕೋರಿರುವ ಪತ್ರಗಳನ್ನು 95 ಚೀಲಗಳು ರಾಜ್ಯದ ವಿವಿಧ ಭಾಗಗಳಿಂದ ಮುಖ್ಯಮಂತ್ರಿಗಳಿಗೆ ಆಗಮಿಸಿದೆ. ಈ ಚೀಲಗಳಲ್ಲಿ ಒಟ್ಟಾಗಿ 5.70 ಲಕ್ಷ ಪತ್ರಗಳು ಇರುವುದಾಗಿ ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ.
ಪೋಸ್ಟ್‌ ಕಾರ್ಡ್‌ಗಳ ಮೂಲಕ ಇಷ್ಟೊಂದು ಮಂದಿ ಮನವಿಯನ್ನು ಕಳುಹಿಸಿದ್ದು, ಅದರ ಬಗ್ಗೆ ಶೀಘ್ರದಲ್ಲಿ ತೀರ್ಮಾನಿಸಿ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ಅಧೀನ ಕಾರ್ಯದರ್ಶಿ (ಆಡಳಿತ) ಜಿ.ಎಲ್‌.ಗಣೇಶ್‌ಕುಮಾರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಲೆನೋವೇ ಈಕೆಗೆ ಅದೃಷ್ಟವಾಯ್ತು! ರಾತ್ರೋರಾತ್ರಿ ಆದ್ಳು ಕೋಟ್ಯಧಿಪತಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:twelve + nineteen =
Remember me
