ಹುಬ್ಬಳ್ಳಿ:ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ತೀವ್ರ ಎಚ್ಚರಿಕೆ ವಹಿಸಲಾಗಿದೆ ಎಂದು ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ದಿಗ್ವಿಜಯ ನ್ಯೂಸ್​ಗೆ ತಿಳಿಸಿದ್ದಾರೆ.
ಸಂದೀಪ್ ತೇಳಸಂಗದ್ ಎಂಬುವವರು ಕಿಮ್ಸ್​ಗೆ ದಾಖಲಾಗಿದ್ದಾರೆ. ಜ್ವರ, ಕಫಾ ಸಮಸ್ಯೆಯಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಸಂದೀಪ್​ ಚೀನಾದಿಂದ ಹಿಂದಿರುಗಿರುವ ಹಿನ್ನೆಲೆಯಲ್ಲಿ ವಿವಿಧ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜ.14ರಂದು ಚೀನಾದಿಂದ ಮುಂಬೈಗೆ ಸಂದೀಪ್ ಬಂದಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಅನುಮಾನ ಬಂದು ನಮ್ಮಲ್ಲಿ ದಾಖಲಾಗಿದ್ದಾರೆ. ನಾವು ಕೂಡಾ ತಪಾಸಣೆ ನಡೆಸಿ ತೀವ್ರ ನಿಗಾ ವಹಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಆತನ ರಕ್ತದ ಸ್ಯಾಂಪಲ್​ನ್ನು ಬೆಂಗಳೂರು ಮತ್ತು ಪುಣೆಗೆ ಕಳುಹಿಸಿದ್ದೇವೆ. ಸಂದೀಪ್​ ಅವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಲ್ಲ. ಶೇ.99 ಆತ ಚೆನ್ನಾಗಿದ್ದಾರೆ‌. ಆದರೆ ಮುಂಜಾಗ್ರತಾ ಕ್ರಮವಾಗಿ ನಾವು ಎಚ್ಚರ ವಹಿಸಿದ್ದೇವೆ. ಅಲ್ಲದೆ ನಮ್ಮ ಸಿಬ್ಬಂದಿಗೂ ಈ ಬಗ್ಗೆ ಸೂಚನೆ‌ ನೀಡಿದ್ದೇವೆ. ನಾಳೆ ರಕ್ತ ಪರೀಕ್ಷೆಯ ವರದಿ ಬರಲಿದೆ. ನಂತರ ಡಿಸ್ಚಾರ್ಜ್ ಮಾಡಲಾಗುವುದು ಎಂದರು.
ಕೊರೊನಾ ವೈರಸ್​ ಶಂಕಿತ ಸಂದೀಪ್​ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುಣೆ ಮತ್ತು ಬೆಂಗಳೂರಿಗೆ ಅವರ ರಕ್ತದ ಮಾದರಿ ಪರೀಕ್ಷೆಗೆ ರವಾನಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಡಾ. ಸಿ, ಅರುಣಕುಮಾರ ತಿಳಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + ten =
Remember me
