ಬೆಂಗಳೂರು:ಬಿಜೆಪಿ ನಾಯಕರು ಪಕ್ಷ ತ್ಯಜಿಸಿ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂಬ ಹೇಳಿಕೆಗಳು ಹೊರಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ, ನಮ್ಮ ಪಕ್ಷದಿಂದ ಯಾರೂ ಕಾಂಗ್ರೆಸ್ ಸೇರುವುದಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಈ ಸರ್ಕಾರಕ್ಕೆ ಯಾವುದೇ ಆಪರೇಷನ್​ ಬೇಕಿಲ್ಲ, ನ್ಯಾಚುರಲ್​ ಡೆಲಿವರಿ ಆಗಲಿದೆ ಕಾಯಿರಿ: ಬಸನ್​ಗೌಡ ಪಾಟೀಲ್​ ಯತ್ನಾಳ್​
ಇಂದು ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಮಾತನಾಡಿದ ಮಾಜಿ ಸಚಿವ, “ಲೋಕಸಭಾ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ಈ ಕಾರಣಕ್ಕೆ ರಾಜ್ಯಾದ್ಯಂತ ಪಕ್ಷ ಸಂಘಟನೆ ಮತ್ತು ಹೋರಾಟ ಮಾಡುತ್ತಿದೆ. ಜೆಡಿಎಸ್ ಮೈತ್ರಿ ವಿಚಾರವನ್ನು ಕೇಂದ್ರದ ನಾಯಕರು ತೀರ್ಮಾನ ಮಾಡಲಿದ್ದಾರೆ. ಅದು ನಮ್ಮ ವ್ಯಾಪ್ತಿಯಲ್ಲಿಲ್ಲ” ಎಂದು ಹೇಳಿದರು.
“ದೇವೇಗೌಡರು ಕೇಂದ್ರದ ನಾಯಕರು, ಈ ವಿಚಾರದ ಬಗ್ಗೆ ಅವರೇ ಚರ್ಚಿಸಲಿದ್ದಾರೆ. ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ದ,ಕ್ಷೇತ್ರ ಹಂಚಿಕೆ ವಿಚಾರ ಹೈ ಕಮಾಂಡ್ ಅಂತಿಮ ಮಾಡಲಿದೆ. ಕಾಂಗ್ರೆಸ್​ ಬಿಜಿಪಿಯಿಂದ ಕೆಲವರು ನಮ್ಮ ಪಕ್ಷ ಸೇರುತ್ತಾರೆ ಎಂಬ ಯೋಚನೆಯನ್ನು ಮಾಡುತ್ತಿದೆ. ಆದ್ರೆ, ಅವರಿಗೆ ತಿಳಿದಿರಲಿ, ಬಿಜೆಪಿಯಿಂದ ಯಾರು ಕಾಂಗ್ರೆಸ್​ಗೆ ಹೋಗುವುದಿಲ್ಲ” ಎಂದು ಹೇಳಿದರು.
ಇದನ್ನೂ ಓದಿ:ಉಹಾಪೋಹ ಬೇಡ…ಮೈತ್ರಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ
“ಪಕ್ಷ ಬಲಪಡಿಸುವ ಆಸೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್​ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ರೆ, ನಮ್ಮ ಪಕ್ಷದಿಂದ ಯಾವ ನಾಯಕರು ಕೂಡ ಬಿಜೆಪಿ ತ್ಯಜಿಸಿ ಕಾಂಗ್ರೆಸ್​ ಸೇರ್ಪಡೆಯಾಗುವುದಿಲ್ಲ. ಕಾಂಗ್ರೆಸ್​ನ ಆಂತರಿಕ ವಿಚಾರದ ಬಗ್ಗೆ ನಾನು ಮಾತನಾಡಲು ಬಯಸುವುದಿಲ್ಲ” ಎಂದು ಹೇಳಿದರು.
ವಾರಣಾಸಿ ಏರ್​ಪೋರ್ಟ್​ಗೆ ಬಾಂಬ್​ ಬೆದರಿಕೆ ಕರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
