ಬೆಂಗಳೂರು:ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ರೂಪಿಸಿರುವ ವಿನೂತನವಾದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಇಂದು(ಶುಕ್ರವಾರ) ನಾಡಿನಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.
ಕಳೆದ ವರ್ಷ ‘ಮಾತಾಡ್​ ಮಾತಾಡ್​ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಲಕ್ಷಕಂಠ ಗಾಯನಕ್ಕೆ ನಾಡಿನಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿತ್ತು. ಈ ಬಾರಿ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ ಅಭಿಯಾನ ನಡೆಸಲಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಸಂಘ-ಸಂಸ್ಥೆಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ- ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್​ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಗಾಯನ ನಡೆಯಿತು. ಮೈಸೂರು ಅರಮನೆ ಆವರಣ, ಸಿದ್ಧಗಂಗಾ ಮಠದ ಆವರಣದಲ್ಲಿ ಸಾವಿರಾರು ಮಂದಿ ಏಕಕಾಲದಲ್ಲಿ ಕನ್ನಡದ ಕಂಪನ್ನು ಪಸರಿಸಿದರು.
ಏಕಾಲದಲ್ಲಿ ಪ್ರಸ್ತುತಿಯಾದ ಐದು ಗೀತೆಗಳು1. ಕುವೆಂಪು ವಿರಚಿತ ನಾಡಗೀತೆ-ಜಯ ಭಾರತ ಜನನಿಯ ತನುಜಾತೆ…2. ಡಾ.ಚನ್ನವಿರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ…3. ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ…4. ಡಾ.ಡಿ.ಎಸ್​.ಕರ್ಕಿಯವರ ಹಚ್ಚೇವು ಕನ್ನಡದ ದೀಪ…5. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕೋಟಿಕಂಠ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ, ಸಚಿವರಾದ ಸುನಿಲ್​ ಕುಮಾರ್​, ಆರ್​.ಅಶೋಕ್​, ಸಂಸದರಾದ ಡಿ.ವಿ.ಸದಾನಂದಗೌಡ, ತೇಜಸ್ವಿ ಸೂರ್ಯ, ರಾಜ್ಯಸಭೆ ಸದಸ್ಯ ಜಗ್ಗೇಶ್​, ಕಸಾಪ ಅಧ್ಯಕ್ಷ ಮಹೇಶ್​ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. 35 ಸಾವಿರಕ್ಕೂ ಅಧಿಕ ಮಂದಿ ಕೋಟಿ ಗಾಯನದಲ್ಲಿ ಭಾಗವಹಿಸಿದ್ದರು.

ಉಡುಪಿಯ ಮಲ್ಪೆಯಲ್ಲಿ ಬೀಚ್​ನಲ್ಲಿ ಚಲಿಸುತ್ತಿರುವ ಬೋಟುಗಳಲ್ಲಿ ಕೋಟಿ ಕಂಠ ಗಾಯನ ನಡೆಯಿತು. ನೂರಕ್ಕೂ ಅಧಿಕ ಬೊಟುಗಳಲ್ಲಿ ಮಲ್ಪೆ ಸೈಂಟ್ ಮೆರೀಸ್ ಸಮುದ್ರ ಮಾರ್ಗದಲ್ಲಿ ಸಾವಿರಾರು ಮಂದಿ ಕನ್ನಡ ಗೀತ ಗಾಯನ ಮಾಡಿದರು. ಮೀನುಗಾರರು ಕನ್ನಡ ಬಾವುಟ ಹಿಡಿದು ಸಂಭ್ರಮಿಸಿದರು.
ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲೂ ಸಾವಿರಾರು ಮಂದಿ ಕೋಟಿ ಕಂಠ ಗಾಯನದಲ್ಲಿ ಪಾಲ್ಗೊಂಡಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಅವರ ಹಾಡು ಕೇಳಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ತಲೆದೂಗಿದರು. ಸಂಸದೆ ಮಂಗಲಾ ಅಂಗಡಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಮಿಷನರ್ ಬೋರಲಿಂಗಯ್ಯ, ಸಾಥ್ ನೀಡಿದರು.

ಮೈಸೂರು ಅರಮನೆ ಅಂಗಳದಲ್ಲಿ ‌ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಗೀತೆಗಳನ್ನು ಹಾಡಿ ‌ರಾಜ್ಯೋತ್ಸವದ ಸಂಭ್ರಮಕ್ಕೆ‌ ಮೆರಗು ತಂದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮಹಾಪೌರ ಶಿವಕುಮಾರ್, ಸಂಸದ ಪ್ರತಾಪ್ ಸಿಂಹ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಕುಲಸಚಿವ ಪ್ರೊ.ಆರ್.ಶಿವಪ್ಪ ಮೊದಲಾದವರು ಪಾಲ್ಗೊಂಡು ಕನ್ನಡ ಗೀತೆಗಳನ್ನು ಹಾಡಿದರು.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ನಡೆಯಿತು. ಡಿಸಿ ವೈ.ಎಸ್. ಪಾಟೀಲ್, ಎಸ್​ಪಿ ರಾಹುಲ್ ಕುಮಾರ್, ಜಿಪಂ ಸಿಇಒ ವಿದ್ಯಾಕುಮಾರಿ, ನಟ ಅಭಿಜಿತ್ ಉಪಸ್ಥಿತರಿದ್ದರು.

ಧಾರವಾಡದ ಕೆಸಿಡಿ ಕಾಲೇಜು ಆವರಣದಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು… ಹಾಡಿಗೆ ಡಾನ್ಸ್​ ಮಾಡಿ ಗಮನ ಸೆಳೆದರು.
ಚಿಕ್ಕಮಗಳೂರು ಜಿಲ್ಲಾ ಆಟದ ಮೈದಾನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಡುತ್ತಾ ಸಿ.ಟಿ.ರವಿ ಡಾನ್ಸ್​ ಮಾಡಿದರು. ಸಚಿವ ಬೈರತಿ ಬಸವರಾಜ್ ಸಾಥ್​ ನೀಡಿದರು.
ಹೀಗೆ… ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಿದ್ದು, ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ತಂದರು. ಕನ್ನಡಿಗರು, ಅನಿವಾಸಿ ಕನ್ನಡಿಗರು, ಹೊರನಾಡ ಕನ್ನಡಿಗರು ಹಾಗೂ ಗಡಿನಾಡ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.
ಕನ್ನಡದ ಮನಸ್ಸುಗಳು ಒಂದಾಗಿವೆ, ಕೋಟಿ ಕಂಠ ಗಾಯನ ಎಲ್ಲರನ್ನೂ ಒಂದುಗೂಡಿಸಿದೆ: ಸಿಎಂ ಬೊಮ್ಮಾಯಿ

ನ.20ಕ್ಕೆ ಬಸವಣ್ಣನವರ ವಚನ ಕಂಠಪಾಠ ಸ್ಪರ್ಧೆ: ವಿಜೇತರಿಗೆ ನಗದು ಬಹುಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 1 =
Remember me
