ಬೆಂಗಳೂರು:ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಂಸತಿ ಇಲಾಖೆ ವತಿಯಿಂದ ಸೆ.28 ರಂದು ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಇದೀಗ ದೇಶ- ವಿದೇಶಗಳಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಇದುವರೆಗೆ 60 ಲಕ್ಷಕ್ಕೂ ಮೇಲ್ಪಟ್ಟು ಜನರು ನೋಂದಣಿ ಮಾಡಿಕೊಂಡಿದ್ದಾರೆ.
ಈ ಕಾರ್ಯಕ್ರಮ ನೋಂದಣಿ ಮಾಡಿಕೊಳ್ಳುವ ಸಲುವಾಗಿ ಇಲಾಖೆ ವತಿಯಿಂದ ಪ್ರತ್ಯೇಕ ಕ್ಯೂ ಆರ್​ ಕೋಡ್​ ವ್ಯವಸ್ಥೆ ಆರಂಭಿಸಿದ್ದು, ಇದರಲ್ಲಿ 29 ರಾಜ್ಯಗಳು ಹಾಗೂ 25 ರಾಷ್ಟ್ರಗಳಿಂದ ಕನ್ನಡ ಪ್ರೇಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಒಂದು ಕೋಟಿ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಏಕ ಕಾಲದಲ್ಲಿ ಕನ್ನಡದ ಕಂಪು ಪಸರಿಸುತ್ತಾರೆ ಎಂಬ ಗುರಿ ಹೊಂದಲಾಗಿತ್ತು. ಆದರೆ ಈಗಾಗಲೇ ಕ್ಯೂಆರ್​ ಕೋಡ್​ಲ್ಲಿ 60 ಲಕ್ಷ ನೋಂದಣಿಯಾಗಿರುವುದನ್ನು ಗಮನಿಸಿದರೆ ಕೋಟಿ ಸಂಖ್ಯೆಯನ್ನು ಮೀರಿ ಕನ್ನಡ ಪ್ರೇಮಿಗಳು ಈ ವೃಂದ ಗಾಯನದಲ್ಲಿ ಭಾಗವಹಿಸಬಹುದು ಎಂಬ ವಿಶ್ವಾಸವನ್ನು ಇಲಾಖೆ ಮೂಲಗಳು ವ್ಯಕ್ತಪಡಿಸಿವೆ.
ಅಕ್ಟೋಬರ್​ 28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್​ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವಿರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್​. ಕರ್ಕಿ ಅವರ ಹಚ್ಚೇವು ಕನ್ನಡದ ದೀಪ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಆರು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುತ ಪಡಿಸಬಹುದು.
ಸಿನಿ ರಂಗದ ನೀರಸ ಸ್ಪಂದನೆ:ಒಂದೆಡೆ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ಹಾಗೂ ಸ್ಪಂದನೆ ವ್ಯಕ್ತವಾಗುತ್ತಿದೆ. ಆದರೆ ಕನ್ನಡ ಚಿತ್ರರಂಗ ಮಾತ್ರ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿರುವುದು ರಾಜ್ಯ ಸರ್ಕಾರದ ಬೇಸರ ತರಿಸಿದೆ. ಕಾರ್ಯಕ್ರಮ ಕುರಿತಂತೆ ಕಿರು ಸಂದೇಶಗಳನ್ನು ನೀಡುವಂತೆ ಮಾಡಿಕೊಂಡ ಮನವಿಗೂ ಪ್ರತಿಕ್ರಿಯೆ ಬಂದಿಲ್ಲ. ಸಂದೇಶ ನೀಡುವುದಕ್ಕೂ ಕೆಲ ನಟರು ಸಂಭಾವನೆ ಕೇಳಿರುವುದು ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿದೆ.
ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಲು ಕರ್ನಾಟಕ ಮಾತ್ರವಲ್ಲ 25 ರಾಷ್ಟ್ರ ಹಾಗೂ 29 ರಾಜ್ಯಗಳಿಂದ ಕನ್ನಡಿಗರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿರುವುದು ಹೆಮ್ಮೆ ಎನಿಸುತ್ತಿದೆ. ಬಿಂದು ಸಿಂಧುವಾಗುವ ರೀತಿ ಕನ್ನಡಿಗರ ಧ್ವನಿ ಕೋಟಿ ಮೀರಲಿ ಎಂದು ಆಶಿಸುತ್ತೇನೆ. ಈ ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರತಿಯೊಬ್ಬರೂ ಭಾಗಿಯಾಗುವಂತೆ ಮನವಿ ಮಾಡುತ್ತೇನೆ.| ವಿ.ಸುನಿಲ್​ ಕುಮಾರ್​ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಸಚಿವ
ನೇಣುಬಿಗಿದ ಸ್ಥಿತಿಯಲ್ಲಿ ಮಾಗಡಿ ಕಂಚುಗಲ್ ಬಂಡೇ ಮಠದ ಸ್ವಾಮೀಜಿ ಶವ ಪತ್ತೆ! ಭಕ್ತರಲ್ಲಿ ಆತಂಕ

ವಿಜಯಪುರದಲ್ಲಿ ಚಲಿಸುತ್ತಿದ್ದ ಗೂಡ್ಸ್ ರೈಲು ಅಪಘಾತ: 6 ರೈಲುಗಳ ಸಂಚಾರ ಇಂದು ಸ್ಥಗಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − fifteen =
Remember me
