ವಿಜಯನಗರ:ಐತಿಹಾಸಿಕ ಶ್ರೀ ಗುರು ಕೊಟ್ಟೂರೇಶ್ವರ ರಥೋತ್ಸವ ಅದ್ಧೂರಿಯಾಗಿ ಜರುಗಿದೆ. ಎಂದಿನಂತೆ ಈ ವರ್ಷವೂ ದೂರದೂರಿನಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕೊಟ್ಟೂರೇಶ್ವರ ರಥೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.
ಜಿಲ್ಲೆಯ ಕೊಟ್ಟೂರು ಪಟ್ಟಣದ ತೇರು ಬೀದಿಯಲ್ಲಿ ನಡೆದ ಅದ್ದೂರಿ ರಥೋತ್ಸವದ ವೇಳೆ ರಥ ಎಳೆಯುತ್ತಿದ್ದಂತೆಯೇ ಭಕ್ತರು ಬಾಳೆ ಹಣ್ಣು ಎಸೆದು ಹರಕೆ ತೀರಿಸಿಕೊಂಡಿದ್ದಾರೆ. ಭಕ್ತರು ಶ್ರೀ ಗುರು ಕೊಟ್ಟೂರೇಶ್ವರನ ದೇಗುಲದಿಂದ ಪಲ್ಲಕ್ಕಿ ಹೊತ್ತು ತಂದರು. ಮೊದಲ ಪೂಜೆ ದಲಿತರ ಮನೆಯಿಂದ ಜರಗುತ್ತದೆ.
ಕೊಟ್ಟೂರೇಶ್ವರ ದೇಗುಲದ ಆಡಳಿತ ಮಂಡಳಿ ಪಲ್ಲಕ್ಕಿಯನ್ನು ರಥೋತ್ಸವಕ್ಕೆ ತಂದು ಪಲ್ಲಕ್ಕಿ ಪ್ರತಿಷ್ಠಾಪನೆ ಮಾಡಿದರು. ಕೊಟ್ಟೂರೇಶ್ವರನಿಗೆ ಹರಕೆ ತೀರಿಸಲು ಪಾದಯಾತ್ರೆ ಮೂಲಕ ನಿನ್ನೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ, ದಾವಣಗೆರೆ, ಹುಬ್ಬಳ್ಳಿ, ಚಿತ್ರದುರ್ಗ ಸೇರಿದಂತೆ ರಾಜ್ಯದ ನಾನಾ ಮೂಲೆಗಳಿಂದ 3 ಲಕ್ಷಕ್ಕೂ ಅಧಿಕ ಭಕ್ತರು ಕೊಟ್ಟೂರೇಶ್ವರನ ಜಾತ್ರೆಯಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 1 =
Remember me
